ಕೇರಳದಲ್ಲಿ ವ್ಯವಸ್ಥಿತ "ಮಾನವ ಕಳ್ಳ ಸಾಗಣೆ": ಸಿಬಿಐ
ಕೇರಳದಲ್ಲಿ ವ್ಯವಸ್ಥಿತವಾಗಿ ಮಾನವ ಕಳ್ಳ ಸಾಗಣೆ ನಡೆಯುತ್ತಿದ್ದು, ಸಾರ್ವಜನಿಕ ಅಧಿಕಾರಿಗಳೂ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐ ವಿಶ್ಲೇಷಿಸಿದೆ...

ಕೊಚ್ಚಿ: ಕೇರಳದಲ್ಲಿ ವ್ಯವಸ್ಥಿತವಾಗಿ ಮಾನವ ಕಳ್ಳ ಸಾಗಣೆ ನಡೆಯುತ್ತಿದ್ದು, ಸಾರ್ವಜನಿಕ ಅಧಿಕಾರಿಗಳೂ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐ ವಿಶ್ಲೇಷಿಸಿದೆ.
ಭಾರತದ ಇತರೆ ಪ್ರದೇಶಗಳಿಗೆ ಹೋಲಿಸಿದರೆ, ಕೇರಳ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕವಾಗಿ ತುಂಬಾ ವ್ಯವಸ್ಥಿತವಾಗಿ ಮಾನವ ಕಳ್ಳ ಸಾಗಣೆ ನಡೆಯುತ್ತಿದೆ. ವಿಪರ್ಯಾಸವೆಂದರೆ ಇಂತಹ ಪ್ರಕರಣಗಳಲ್ಲಿ ಸರ್ಕಾರಿ ಅಧಿಕಾರಿಗಳೇ ಪರೋಕ್ಷವಾಗಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಸಂಬಂಧ ನಡೆಯುತ್ತಿರುವ ವಿಚಾರಣೆಯಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿರುವ ಸಿಬಿಐ ಅಧಿಕಾರಿಗಳು 2 ಮಾನವ ಕಳ್ಳ ಸಾಗಣೆ ಪ್ರಕರಣಗಳಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳ ಹೆಸರನ್ನು ನಮೂದಿಸಿದ್ದಾರೆ.
ನೆಡುಂಬಸ್ಸೆರಿ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಪ್ರಕರಣದಲ್ಲಿ ಕೇರಳ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮತ್ತು ಅವರ ಸಹೋದರ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಹೀಗಾಗಿ ಸಬ್ ಇನ್ಸ್ ಪೆಕ್ಟರ್ ಎಹೆಚ್ ಸಫೀರ್ ಅಲಿಯಾಸ್ ಅಬ್ದುಲ್ ಜಬ್ಬಾರ್ ಹಬೀಬಾ ಬೀವಿ ಸಫೀರ್ ಮತ್ತು ಟ್ರಾವೆಲ್ ಸಂಸ್ಥೆ ಮುಖ್ಯಸ್ಥ ಪಿಎ ನಿಯಾಜ್, ಪಿಕೆ ಶಹಜಹಾನ್, ಅಬಕಾರಿ ಅಧಿಕಾರಿ ಎಹೆಚ್ ಸಜೀರ್ ವಿರುದ್ಧ ಚಾರ್ಜ್ ಶೀಟ್ ದಾಖಲಿಸಲಾಗಿದೆ.
ಈ ಅಧಿಕಾರಿಗಳು ಸೂಕ್ತ ದಾಖಲೆಗಳಿಲ್ಲದ ಪ್ರಯಾಣಿಕರಿಗೆ ನಕಲಿ ದಾಖಲೆ ಸೃಷ್ಟಿಸಿ ವಿದೇಶಗಳಿಗೆ ರವಾನಿಸುತ್ತಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ ನಮೂದಿಸಲಾಗಿದೆ ಎಂದು ತಿಳಿದುಬಂದಿದೆ. ಟ್ರಾವೆಲ್ ಸಂಸ್ಥೆ ಮಾಲೀಕರಾದ ನಿಯಾಜ್ ಮತ್ತು ಶಹಜಹಾನ್ ಅವರು ತಮ್ಮ ಖಾತೆಯಿಂದ ಸಜೀರ್ ಖಾತೆ ಕ್ರಮವಾಗಿ 1.28 ಲಕ್ಷ ಮತ್ತು 46, 500 ರು. ಪಾವತಿ ಮಾಡಿರುವ ಕುರಿತು ದಾಖಲೆ ಲಭ್ಯವಾಗಿದೆ ಎಂದು ಅಧಿಕಾರಿಗಳು ತಮ್ಮ ಚಾರ್ಜ್ ಶೀಟ್ ನಲ್ಲಿ ದಾಖಲಿಸಿದ್ದಾರೆ.
ಇದೀಗ ಈ ಪ್ರಕರಣ ಕೇರಳದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಮಾನವ ಕಳ್ಳ ಸಾಗಣೆಯ ಮತ್ತೊಂದು ಕರಾಳ ಮುಖವನ್ನು ಈ ಪ್ರಕರಣ ತೋರಿಸಿದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


