ದೇಶ

ತಾಂಜಾನಿಯಾ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಪ್ರಕರಣ: ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್

ಬೆಂಗಳೂರಿನಲ್ಲಿ ತಾಂಜಾನಿಯಾ ಮೂಲದ ವಿದ್ಯಾರ್ಥಿನಿ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ...

ತಾಂಜಾನಿಯಾ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಪ್ರಕರಣ: ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್
ವಿಧಾನ ಸೌಧ
Published On :

ನವದೆಹಲಿ: ಬೆಂಗಳೂರಿನಲ್ಲಿ ತಾಂಜಾನಿಯಾ ಮೂಲದ ವಿದ್ಯಾರ್ಥಿನಿ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ, ಪ್ರಕರಣ ಕುರಿತು ತಕ್ಷಣ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ರಾಷ್ಟ್ರೀಯ ಮಹಿಳಾ ಆಯೋಗ ಪ್ರಕರಣದ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿದೆ. ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಆಯೋಗದ ಸದಸ್ಯೆ ಸುಷ್ಮಾ ಶಾಹು ಅವರು, ಈ ಘಟನೆ ರಾಷ್ಟ್ರಕ್ಕೆ ಆಗಮಿಸುವ ವಿದೇಶಿ ಪ್ರಜೆಗಳಿಗೆ ಇಲ್ಲಿರುವ ಭದ್ರತೆ ಮತ್ತು ಸುರಕ್ಷತೆ ಬಗ್ಗೆ ವಿಶ್ವದಾದ್ಯಂತ ತಪ್ಪು ಸಂದೇಶ ರವಾನಿಸುತ್ತದೆ ಎಂದು ಎಚ್ಚರಿಸಿದ್ದಾರೆ.

ಘಟನೆ ಬಳಿಕ ಕೇಂದ್ರ ಸರ್ಕಾರ, ಗೃಹ ಸಚಿವಾಲಯ ಸೇರಿದಂತೆ ಕಾಂಗ್ರೆಸ್‌ ವರಿಷ್ಠರೂ ಪ್ರಕರಣದ ಬಗ್ಗೆ ವಿವರವಾದ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.