ದೇಶ

ಗುಜರಾತ್ ನಲ್ಲಿ ನದಿಗೆ ಬಿದ್ದ ಬಸ್; 4 ಸಾವು, ಹಲವರು ನಾಪತ್ತೆ

ಪ್ರಯಾಣಿಕರ ಹೊತ್ತಿದ್ದ ಸರ್ಕಾರಿ ಬಸ್ ವೊಂದು ನದಿಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುಜರಾತ್ ನವ್ಸಾರಿಯಲ್ಲಿ ಶುಕ್ರವಾರ ನಡೆದಿದೆ...

ಗುಜರಾತ್ ನಲ್ಲಿ ನದಿಗೆ ಬಿದ್ದ ಬಸ್; 4 ಸಾವು, ಹಲವರು ನಾಪತ್ತೆ
ಪೂರ್ಣಾ ನದಿಗೆ ಉರುಳಿದ ಬಸ್ (ಚಿತ್ರಕೃಪೆ: ಆಜ್ ತಕ್)
Published On :

ಅಹ್ಮದಾಬಾದ್: ಪ್ರಯಾಣಿಕರ ಹೊತ್ತಿದ್ದ ಸರ್ಕಾರಿ ಬಸ್ ವೊಂದು ನದಿಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುಜರಾತ್ ನವ್ಸಾರಿಯಲ್ಲಿ ಶುಕ್ರವಾರ ನಡೆದಿದೆ.

ಸುಮಾರು 60 ಪ್ರಯಾಣಿಕರನ್ನು ಹೊತ್ತಿದ್ದ ಗುಜರಾತ್ ಸಾರಿಗೆ ಸಂಸ್ಥೆ ಸೇರಿದ ಬಸ್ ನವ್ಸಾರಿಯಿಂದ ಉಕಾಯಿ ಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಈ ವೇಳೆ ಪೂರ್ಣಾ ನದಿ ಮೇಲ್ಸೇತುವೆ  ಮೇಲೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ನೇರವಾಗಿ ಮೇಲ್ಸೇತುವೆಯಿಂದ ನದಿಗೆ ಬಿದ್ದಿದೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಿಮಿಸಿರುವ ಅಗ್ನಿಶಾಮಕದಳ ಮತ್ತು ಪೊಲೀಸ್ ಸಿಬ್ಬಂದಿಗಳು  ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಕಾರ್ಯಾಚರಣೆ ಭರದಿಂದ ಸಾಗಿದೆ.

ಇನ್ನು ಪ್ರಸ್ತುತ 4 ಶವಗಳು ದೊರೆತಿದ್ದು, ಮೇಲ್ನೋಟಕ್ಕೆ ಸುಮಾರು 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಬಸ್ ನಲ್ಲಿದ್ದೆ ಕೆಲ ಪ್ರಯಾಣಿಕರು ನಾಪತ್ತೆಯಾಗಿದ್ದು,  ಅವರ ಪತ್ತೆಗಾಗಿ ವ್ಯಾಪಕ ಶೋಧ ನಡೆಸಲಾಗುತ್ತಿದೆ. ನುರಿತ ಮುಳುಗ ತಜ್ಞರನ್ನು ಘಟನಾ ಸ್ಥಳಕ್ಕೆ ಕರೆಸಲಾಗಿದ್ದು, ಶೋಧ ಕಾರ್ಯ ಭರದಿಂದ ಸಾಗಿದೆ. ಗಾಯಾಳುಗಳನ್ನು ಸಮೀಪದ ನವ್ಸಾರಿ  ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ನವ್ಸಾರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.