ದೇಶ

ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿಗೆ ಕೇಂದ್ರ ಚಿಂತನೆ

ಮುಂದಿನ ಬಜೆಟ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ಪಂಚಾಯಿತಿಗಳಲ್ಲಿ ಮಹಿಳೆಯರ ಶೇ.33ರಷ್ಟು ...

ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿಗೆ ಕೇಂದ್ರ ಚಿಂತನೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಮುಂದಿನ ಬಜೆಟ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ಪಂಚಾಯಿತಿಗಳಲ್ಲಿ  ಮಹಿಳೆಯರ ಶೇ.33ರಷ್ಟು ಮೀಸಲಾತಿಯನ್ನು ಶೇ.50ಕ್ಕೆ ಏರಿಸಲಾಗುವುದು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಬಿರೇಂದರ್ ಸಿಂಗ್ ತಿಳಿಸಿದ್ದಾರೆ.
 
ದೇಶದ  ಕೆಲ ರಾಜ್ಯಗಳು ಮಹಿಳೆಯರಿಗೆ ಪಂಚಾಯಿತಿಗಳಲ್ಲಿ ಶೇ.50 ರಷ್ಟು ಮೀಸಲಾತಿಯನ್ನು ನೀಡುತ್ತಿವೆ. ಆದರೆ, ಸಂವಿಧಾನಕ್ಕೆ ತಿದ್ದುಪಡಿ ತಂದು ದೇಶಾದ್ಯಂತ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಜಾರಿಗೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಸಿಂಗ್ ಮಾಹಿತಿ ನೀಡಿದ್ದಾರೆ.

ಪಂಚಾಯತ್ ರಾಜ್ ಕಾಯ್ದೆಗೆ ಸಂವಿಧಾನ ತಿದ್ದುಪಡಿ ತಂದು ಮಹಿಳೆಯರಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಇತರ ಪಕ್ಷಗಳು ಬೆಂಬಲ ಸೂಚಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.  

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬೇರುಮಟ್ಟದಿಂದ ಸಶಕ್ತಗೊಳಿಸಲು ಮತ್ತು ಮಹಿಳೆಯರಿಗೆ ಹೆಚ್ಚಿನ ಉದ್ಯೋಗವಕಾಶ ಒದಗಿಸಲು  ಮೋದಿ ಸರಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.