ಪಿಂಚಣಿಗೆ ಅರ್ಜಿ ಸಲ್ಲಿಸಿದ ಸುರೇಶ್ ರೈನಾ, ಗಬ್ಬರ್, ಕೈಲಾಶ್ ಖೆಹರ್
ಯಶ್ ಭಾರ್ತಿ ಪ್ರಶಸ್ತಿ ಪುರುಸ್ಕೃತರಿಗೆ ಉತ್ತರ ಪ್ರದೇಶ ಸರ್ಕಾರ ನೀಡುವ ಪಿಂಚಣಿ ಪಡೆಯಲು ಕ್ರಿಕೆಟಿಗ ಸುರೇಶ್ ರೈನಾ...

Published On :
ಲಖನೌ: ಯಶ್ ಭಾರ್ತಿ ಪ್ರಶಸ್ತಿ ಪುರುಸ್ಕೃತರಿಗೆ ಉತ್ತರ ಪ್ರದೇಶ ಸರ್ಕಾರ ನೀಡುವ ಪಿಂಚಣಿ ಪಡೆಯಲು ಕ್ರಿಕೆಟಿಗ ಸುರೇಶ್ ರೈನಾ, ಮೊಹಮ್ಮದ್ ಕೈಫ್, ಹಿರಿಯ ನಟ ರಾಜ್ ಬಬ್ಬರ್, ಗಾಯಕ ಕೈಲಾಶ್ ಖೆಹರ್ ಸೇರಿದಂತೆ 100 ಮಂದಿ ಪ್ರಮುಖರು ಅರ್ಜಿ ಸಲ್ಲಿಸಿದ್ದಾರೆ.
ಯಶ್ ಭಾರ್ತಿ ಪ್ರಶಸ್ತಿ ಪುರಸ್ಕೃತರಿಗೆ ತಿಂಗಳಿಗೆ ರು.50 ಸಾವಿರ ಪಿಂಚಣಿ ನೀಡುವುದಾಗಿ ಉತ್ತರ ಪ್ರದೇಶ ಸರ್ಕಾರ ಕಳೆದ ವರ್ಷ ಅಕ್ಟೋಬರ್ ನಲ್ಲಿ ಘೋಷಿಸಿತ್ತು.
ಉತ್ತರ ಪ್ರದೇಶದಲ್ಲಿ ಒಟ್ಟು 141 ಮಂದಿ ಯಶ್ ಭಾರ್ತಿ ಪ್ರಶಸ್ತಿ ಪುರಸ್ಕೃತರಿದ್ದಾರೆ. ಇವರಲ್ಲಿ ಪಿಂಚಣಿಗಾಗಿ 108 ಮಂದಿ ಅರ್ಜಿ ಸಲ್ಲಿಸಿದ್ದಾರೆ.
ಆದರೆ, ವಿರೋಧಪಕ್ಷಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸಾರ್ವಜನಿಕ ಹಣವನ್ನು ಈ ರೀತಿ ವ್ಯಯ ಮಾಡಬಾರದು ಎಂದು ಅಭಿಪ್ರಾಯಪಟ್ಟಿವೆ.
ಪಿಂಚಣಿ ಯೋಜನೆ ಘೋಷಣೆಯಾಗುತ್ತಿದ್ದಂತೆ ಕಳೆದ ನವೆಂಬರ್ ನಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಪಿಂಚಣಿಯನ್ನು ನಿರಾಕರಿಸಿದ್ದರು.
ಪಿಂಚಣಿ ಹಣವನ್ನು ಒಳ್ಳೆ ಕೆಲಸಕ್ಕೆ ಬಳಸುವುದಾಗಿ ಗಾಯಕ ಕೈಲಾಶ್ ಖೆಹರ್ ಹೇಳಿದ್ದಾರೆ. ಕಲಾವಿದರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸರ್ಕಾರ ಈ ರೀತಿ ಯೋಜನೆಯನ್ನು ಜಾರಿಗೆ ತಂದಿದೆ. ಇದನ್ನು ಸ್ವಾಗತಿಸುತ್ತೇವೆ ಎಂದು ಕೆಲ ಕಲಾವಿದರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Suresh Rainaಸುರೇಶ್ ರೈನಾರಾಜ್ ಬಬ್ಬರ್Raj BabbarKailash KherYash Bharti awardಕೈಲಾಶ್ ಕೆಹರ್ಯಶ್ ಭಾರ್ತಿ ಪ್ರಶಸ್ತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


