ವಿದ್ಯಾರ್ಥಿ ದಿವ್ಯಾಂಶ ಕಕ್ರೋರಾ ಸಾವು ಪ್ರಕರಣ:ಸಿಬಿಐ ತನಿಖೆಗೆ ದೆಹಲಿ ಸರ್ಕಾರ ಆದೇಶ
ದೆಹಲಿಯ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯ 1 ನೇ ತರಗತಿ ವಿದ್ಯಾರ್ಥಿ ದಿವ್ಯನಾಶ್ ಕಕ್ರೋರಾ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಸೋಮವಾರ...

Published On :
ನವದೆಹಲಿ: ದೆಹಲಿಯ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯ 1 ನೇ ತರಗತಿ ವಿದ್ಯಾರ್ಥಿ ದಿವ್ಯನಾಶ್ ಕಕ್ರೋರಾ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಸೋಮವಾರ ದೆಹಲಿ ಸರ್ಕಾರ ಆದೇಶಿಸಿದೆ.
ಕಳೆದ ಜನವರಿ 30ರಂದು 6 ವರ್ಷದ ದಿವ್ಯಾಂಶ ಶಾಲಾ ಶೌಚಾಲಯದಲ್ಲಿ ಬಿದ್ದು ಸಾವನ್ನಪ್ಪಿದ್ದ. ಬಳಿಕ ಶಾಲಾ ಸಿಬ್ಬಂದಿ ಈ ವಿಷಯವನ್ನು ಪೋಷಕರಿಗೆ ತಿಳಿಸುವ ಮೊದಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಶಾಲೆಯಲ್ಲಿ ಸಂಭವಿಸಿದ ಈ ಘಟನೆ ಬಗ್ಗೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಮಧ್ಯೆ, ಪ್ರಾಥಮಿಕ ತನಿಖೆಯ ಪ್ರಕಾರ, ದಿವ್ಯಾಂಶ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ ಅವರು ಇಂದು ಸ್ಪಷ್ಟಪಡಿಸಿದ್ದಾರೆ,
ಮರಣೋತ್ತರ ವರದಿ ಬಂದಿದ್ದು, ಮೇಲ್ನೋಟಕ್ಕೆ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಸಂದರ್ಭದಲ್ಲಿ ನಾನು ಇದಕ್ಕು ಹೆಚ್ಚು ಏನನ್ನು ಹೇಳಲು ಸಾಧ್ಯವಿಲ್ಲ ಎಂದು ಬಸ್ಸಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


