ಸುಪ್ರೀಂ ತೀರ್ಪಿನ ನಂತರವಷ್ಟೇ ರಾಮ ದೇಗುಲ ನಿರ್ಮಾಣ ನಿರ್ಧಾರ: ಕಲ್‌ರಾಜ್ ಮಿಶ್ರಾ
ಸುಪ್ರೀಂಕೋರ್ಟ್ ತೀರ್ಪು ಬಂದ ನಂತರವಷ್ಟೇ ರಾಮ ದೇಗುಲ ನಿರ್ಮಾಣ ಕುರಿತಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಕಲ್‌ರಾಜ್ ಮಿಶ್ರಾ ಅವರು ಸೋಮವಾರ ಹೇಳಿದ್ದಾರೆ...

ನವದೆಹಲಿ: ಸುಪ್ರೀಂಕೋರ್ಟ್ ತೀರ್ಪು ಬಂದ ನಂತರವಷ್ಟೇ ರಾಮ ದೇಗುಲ ನಿರ್ಮಾಣ ಕುರಿತಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಕಲ್‌ರಾಜ್ ಮಿಶ್ರಾ ಅವರು ಸೋಮವಾರ ಹೇಳಿದ್ದಾರೆ.
ಅಯೋಧ್ಯೆ ರಾಮ ದೇಗುಲ ನಿರ್ಮಾಣ ಕುರಿತಂತೆ ಮಾತನಾಡಿರುವ ಅವರು, ರಾಮ ದೇಗುಲ ವಿಚಾರದಲ್ಲಿ ಬಿಜೆಪಿ ತನ್ನ ನಿಲುವನ್ನು ಎಂದಿಗೂ ಬದಲಿಸುವುದಿಲ್ಲ. ಸುಪ್ರೀಂಕೋರ್ಟ್ ಈ ಬಗ್ಗೆ ತೀರ್ಪು ನೀಡುವವರೆಗೂ ಕಾಯಲೇ ಬೇಕಿದೆ. ತೀರ್ಪು ಬಂದ ನಂತರವಷ್ಟೇ ದೇಗುಲ ನಿರ್ಮಾಣ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ ಪರಿಸ್ಥಿತಿಗೆ ಅನುಗುಣವಾಗಿ ಕೇಂದ್ರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ವಿಶ್ವ ಹಿಂದೂ ಪರಿಷತ್ ನಡೆಸಿದ ಸಭೆಯಲ್ಲಿ ಸಂಘ ಪರಿವಾರ ನಾಯಕರು ಪ್ರಧಾನಿ ಮೋದಿಯವರು ದೇಗುಲ ನಿರ್ಮಾಣ ವಿಚಾರದಲ್ಲಿ ವಹಿಸಿರುವ ಮೌನವನ್ನು ಕೂಡಲೇ ಮುರಿಯಬೇಕು ಎಂದು ಆಗ್ರಹಿಸಿದ್ದರು.
ಸಂಘ ಪರಿವಾರದ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿರುವ ಮಿಶ್ರಾ ಅವರು, ಮೋದಿಯವರು ದೇಶದ ಪ್ರತಿಯೊಂದು ಕ್ಷೇತ್ರಕ್ಕೂ ಭೇಟಿ ನೀಡುತ್ತಿದ್ದಾರೆ. ಅಯೋಧ್ಯೆಗೆ ಯಾಕೆ ಭೇಟಿ ನೀಡಿಲ್ಲ ಎಂಬುದಕ್ಕೆ ಯಾವುದೇ ಕಾರಣಗಳಿಲ್ಲ. ಧಾರ್ಮಿಕ ನಾಯಕ ಭಾವನೆಗಳನ್ನು ಗೌರವಿಸಬೇಕು. ಪ್ರಧಾನಿಯವರು ವೈಯಕ್ತಿಕವಾಗಿ ಯಾವುದೇ ನಿರ್ಧಾನಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕಿದೆ. ಮೋದಿಯವರು ಅಯೋಧ್ಯೆಯಲ್ಲಿ ದೇಗುಲ ನಿರ್ಮಾಣವನ್ನು ಮಾಡಲಿದ್ದಾರೆಂದರ ಬಗ್ಗೆ ಮಾತ್ರ ಭರವಸೆ ನೀಡಬಲ್ಲೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


