ಕೇರಳ ಚುನಾವಣೆ: ಫೆ.9 ರಂದು ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಿರುವ ರಾಹುಲ್ ಗಾಂಧಿ
ವಿಧಾನಸಭಾ ಚುನಾವಣೆಗೆ ಕೇರಳ ಸಜ್ಜುಗೊಳ್ಳುತ್ತಿದ್ದು, ಆಡಳಿತದಲ್ಲಿರುವ ಯುಡಿಎಫ್ ಪರ ಪ್ರಚಾರಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಫೆ.9 ರಂದು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ತಿರುವನಂತಪುರಮ್: ವಿಧಾನಸಭಾ ಚುನಾವಣೆಗೆ ಕೇರಳ ಸಜ್ಜುಗೊಳ್ಳುತ್ತಿದ್ದು, ಆಡಳಿತದಲ್ಲಿರುವ ಯುಡಿಎಫ್ ಪರ ಪ್ರಚಾರಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಫೆ.9 ರಂದು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.
ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರ ಅಸ್ತಿತ್ವದಲ್ಲಿದ್ದು ಸರ್ಕಾರದ ಅವಧಿ 2016 ರ ಮೇ 31 ಕ್ಕೆ ಅಂತ್ಯಗೊಳ್ಲಲಿದ್ದು ಇದಕ್ಕೂ ಮುನ್ನ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಧನಾಸಭಾ ಚುನವಾಣೆಗೆ ರಾಜಕೀಯ ಪಕ್ಷಗಳು ತಯಾರಿ ನಡೆಸಲಿದ್ದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಪರ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಕೇರಳ ಭೇಟಿ ವೇಳೆ ರಾಹುಲ್ ಗಾಂಧಿ ಕೆಲವು ಮುಖ್ಯವಾದ ಘೋಷಣೆ ಮಾಡುವವರಿದ್ದಾರೆ ಎಂದು ಕೇರಳ ಸಿಎಂ ಉಮ್ಮನ್ ಚಾಂಡಿ ಹೇಳಿದ್ದಾರೆ. ಕೇರಳ ಕಾಂಗ್ರೆಸ್ ಅಧ್ಯಕ್ಷ ವಿಎಂ ಸುದೀರನ್ ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಯಾತ್ರೆ ರಾಜಧಾನಿಗೆ ತಲುಪಿದ್ದು ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.
ಪ್ರಚಾರಕ್ಕೆ ಚಾಲನೆ ನೀಡಿದ ಬಳಿಕ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. 140 ಸದಸ್ಯರ ಬಲ ಹೊಂದಿರುವ ಕೇರಳ ವಿಧಾನಸಭೆಗೆ ಏಪ್ರಿಲ್- ಮೇ ನಲ್ಲಿ ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


