ದೇಶ

ಸಚಿನ್ ತೆಂಡೂಲ್ಕರ್‌ನಿಂದ ರಸ್ತೆ ಸುರಕ್ಷಾ ಅಭಿಯಾನ

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ರಸ್ತೆ ಸುರಕ್ಷಾ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಭಾನುವಾರ ನವದೆಹಲಿಯಲ್ಲಿ 5000 ಮಕ್ಕಳಿಗೆ...

ಸಚಿನ್ ತೆಂಡೂಲ್ಕರ್‌ನಿಂದ ರಸ್ತೆ ಸುರಕ್ಷಾ ಅಭಿಯಾನ
ರಸ್ತೆ ಸುರಕ್ಷಾ ಅಭಿಯಾನಕ್ಕೆ ಕೈ ಜೋಡಿಸಿದ ಸಚಿನ್ ತೆಂಡೂಲ್ಕರ್
Published On :
ನವದೆಹಲಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ರಸ್ತೆ ಸುರಕ್ಷಾ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಭಾನುವಾರ ನವದೆಹಲಿಯಲ್ಲಿ 5000 ಮಕ್ಕಳಿಗೆ ರಸ್ತೆ ಸುರಕ್ಷೆ ಬಗ್ಗೆ ಪ್ರತಿಜ್ಞೆ ಹೇಳಿ ಕೊಡುವ ಮೂಲಕ ಸಚಿನ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಪ್ರತೀ ದಿನ ರಸ್ತೆಗಳಲ್ಲಿ ಹಲವಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಿರುವುದು ದುಃಖದ ಸಂಗತಿ. ರಸ್ತೆ ನಿಯಮಗಳನ್ನು ಪಾಲಿಸುವುದು ಎಲ್ಲರ ಕರ್ತವ್ಯ ಎಂದು ಅಭಿಯಾನಕ್ಕೆ ಚಾಲನೆ ನೀಡಿದ ಸಚಿನ್ ಹೇಳಿದ್ದಾರೆ.
ಕ್ರಿಕೆಟ್‌ನಲ್ಲಿ ಬ್ಯಾಟ್ಸ್‌ಮೆನ್ ಮತ್ತು ನಾನ್ ಸ್ಟ್ರೈಕರ್ ನಡುವೆ ಇರುವ ಜತೆಯಾಟದಂತೆ ವಾಹನ ಚಾಲಕರು ಮತ್ತು ಪಾದಚಾರಿಗಳ ನಡುವೆ ಪಾಟ್ನರ್‌ಶಿಪ್ ಇರಬೇಕು ಎಂದು ಸಚಿನ್ ಅಭಿಪ್ರಾಯ ಪಟ್ಟಿದ್ದಾರೆ. ಆಸ್ಟರ್ ಡಿಎಂ ಹೆಲ್ತ್‌ಕೇರ್ ನ ಸಹಯೋಗದಲ್ಲಿ ಈ ಅಭಿಯಾನ ನಡೆದಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.