ಪ್ರಧಾನಿ ದತ್ತು ಪಡೆದ ಗ್ರಾಮಕ್ಕೆ ಒಳ್ಳೆಯ ದಿನಗಳು: ಎಲ್ಲಾ ಮನೆಗಳಿಗೂ ಉಚಿತ ವಿದ್ಯುತ್
ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ದತ್ತು ಪಡೆದಿರುವ ಗ್ರಾಮಕ್ಕೆ ಒಳ್ಳೆಯ ದಿನಗಳು ಬಂದಿವೆ.

ವಾರಾಣಸಿ: ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ದತ್ತು ಪಡೆದಿರುವ ಗ್ರಾಮಕ್ಕೆ ಒಳ್ಳೆಯ ದಿನಗಳು ಬಂದಿವೆ.
ಪ್ರಧಾನಿ ದತ್ತು ಪಡೆದ ಜಯಪುರ ಗ್ರಾಮ ದೇಶದ ಮೊದಲ ಗ್ರೀನ್ ಸೋಲಾರ್ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗುವುದೂ ಅಲ್ಲದೇ, 810 ಕುಟುಂಬಗಳಿರುವ ಗ್ರಾಮದ ಜನರಿಗೆ ಉಚಿತವಾಗಿ ವಿದ್ಯುತ್ ಪೂರೈಕೆಯಾಗಲಿದೆ. ಮಾಧ್ಯಮವೊಂದರ ವರದಿ ಪ್ರಕಾರ ವೆಲ್ಸ್ಪನ್ ಸೋಲಾರ್ ಸಂಸ್ಥೆ ಗ್ರಾಮದ ಎಲ್ಲಾ ಮನೆಗಳಿಗೂ ಸೋಲಾರ್ ಪ್ಯಾನಲ್ ಗಳನ್ನು ಉಚಿತವಾಗಿ ನೀಡುತ್ತಿದೆ.
25 ಕಿಲೋ ವ್ಯಾಟ್ ಸಾಮರ್ಥ್ಯದ ಎರಡು ಸೋಲಾರ್ ಘಟಕಗಳು ಈಗಾಗಲೇ ಕಾರ್ಯ ನಿರ್ವಹಿಸುತ್ತಿವೆ. ಎರಡೂ ಘಟಕಗಳು ಗ್ರಾಮದ 720 ಕುಟುಂಬಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುತ್ತಿವೆ ಎಂದು ಗ್ರಾಮದ ಮುಖ್ಯಸ್ಥ ಶ್ರೀನಾರಾಯಣ್ ಪಟೇಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


