ದೆಹಲಿಯಲ್ಲಿ ಅಗ್ನಿ ದುರಂತ: ಒಂದೇ ಕುಟುಂಬದ ನಾಲ್ವರು ಸಾವು
ರಾಜಧಾನಿಯ ದೆಹಲಿಯ ದಿಲ್ ಶಾದ್ ಗಾರ್ಡನ್ ಪ್ರದೇಶದಲ್ಲಿನ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 8 ವರ್ಷದ ಮಗು ಸೇರಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ...

ನವದೆಹಲಿ; ರಾಜಧಾನಿಯ ದೆಹಲಿಯ ದಿಲ್ ಶಾದ್ ಗಾರ್ಡನ್ ಪ್ರದೇಶದಲ್ಲಿನ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 8 ವರ್ಷದ ಮಗು ಸೇರಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
ದುರಂತದಲ್ಲಿ ಪ್ರದೀಪ್ ಜೈಸ್ವಾಲ್ (59), ರಾಜನ್ (34), ಅನುಜಾ (33) ಅಂಶುಲ್ (8) ಮೃತರಾಗಿದ್ದು, ನಾಲ್ಕೂ ಮಂದಿ ಒಂದೇ ಕುಟುಂಬದವರಾಗಿದ್ದಾರೆಂದು ಹೇಳಲಾಗುತ್ತಿದೆ. ಮೃತರು ಡಿಡಿಎ ಕಾಲೋನಿಯ ದಿಲ್ ಶಾದ್ ಗಾರ್ಡನ್ ನಲ್ಲಿರುವ ತಮ್ಮ ಫ್ಲ್ಯಾಟ್ ನಲ್ಲಿ ಡ್ರೈ ಕ್ಲೀನಿಂಗ್ ಕೆಲಸ ಮಾಡುತ್ತಾ ಅಂಗಡಿಯನ್ನು ನಡೆಸುತ್ತಿದ್ದರು.
ಪ್ರಾಥಮಿಕ ವರದಿಗಳ ಪ್ರಕಾರ ಘಟನೆ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿರುವುದಾಗಿ ಹೇಳಲಾಗುತ್ತಿದ್ದು, ಅಗ್ನಿ ಅವಘಟ ಸಂಭವಿಸಿದ ಕೆಲವೇ ನಿಮಿಷಗಳಲ್ಲಿ ಬೆಂಕಿ ಫ್ಲ್ಯಾಟನ ಪ್ರಥಮ ಮಹಡಿಯಗೆ ಹಬ್ಬಲು ಆರಂಭಿಸಿತ್ತು. ನಂತರ ಸ್ಥಳಕ್ಕಾಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಘಟನೆ ವೇಳೆ ಗಾಯಾಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ನಾಲ್ವರು ಸಾವನ್ನಪ್ಪಿದ್ದರು. ಪ್ರಸ್ತುತ ಪ್ರದೀಪ್ ಜೈಸ್ವಾಲ್ ಅವರ ಪತ್ನಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


