ರಾಜ್ಯಪಾಲರ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ರಾಷ್ಟ್ರಪತಿ ಭವನದಲ್ಲಿ ಫೆ.9 ರಂದು ಪ್ರಾರಂಭವಾಗಲಿರುವ ಎರಡುದಿನಗಳು ನಡೆಯಲಿರುವ ರಾಜ್ಯಪಾಲರ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ.

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಫೆ.9 ರಂದು ಪ್ರಾರಂಭವಾಗಲಿರುವ ಎರಡುದಿನಗಳು ನಡೆಯಲಿರುವ ರಾಜ್ಯಪಾಲರ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ.
ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪ್ರಣಬ್ ಮುಖರ್ಜಿ 4 ನೇ ಬಾರಿಗೆ ರಾಜ್ಯಪಾಲರ ಸಮ್ಮೇಳನದ ಅಧ್ಯಕ್ಷತೆ ವಹಿಸುತ್ತಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ 47 ನೇ ಸಮ್ಮೇಳನ ಇದಾಗಿದ್ದು 23 ರಾಜ್ಯಪಾಲರು, ಇಬ್ಬರು ಲೆಫ್ಟಿನೆಂಟ್ ಗೌರ್ನರ್ ಗಳು ಸಹ ಭಾಗವಹಿಸಲಿದ್ದಾರೆ.
ಸಮ್ಮೇಳನದಲ್ಲಿ ಭಯೋತ್ಪಾದನೆ ಹಾಗೂ ಬಂಡಾಯ ಚಟುವಟಿಕೆ, ಉದ್ಯೋಗ ಸೃಷ್ಟಿ, ಶಾಲೆಗಳ ಅಭಿವೃದ್ಧಿ, ಸ್ವಚ್ಛ ಭಾರತದಂತಹ ಯೋಜನೆಗಳ ಜಾರಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


