ಪ್ರೇಮಿಗಳ ದಿನ ಆಚರಿಸಲು ಬ್ಯಾಂಕ್ ಸಾಲ ಕೇಳಿದ!
ಗುಜರಾತ್‌ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪ್ರೊಬೆಷನರಿ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ವ್ಯಾಲೆಂಟೈನ್ಸ್ ಡೇ...

Published On :
ನವದೆಹಲಿ: ಗುಜರಾತ್‌ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪ್ರೊಬೆಷನರಿ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ವ್ಯಾಲೆಂಟೈನ್ಸ್ ಡೇ ಆಚರಿಸಲು ಸಾಲ ನೀಡಿ ಎಂದು ಬ್ಯಾಂಕ್‌ಗೆ ಅರ್ಜಿ ಸಲ್ಲಿಸಿದ್ದಾರೆ.
25ರ ಹರೆಯದ ದಿಗ್ವಿಜಯ್ ಸಿಂಗ್ ತನಗೆ ವ್ಯಾಲೆಂಟೈನ್ಸ್ ಡೇ ಆಚರಿಸಲು ರು. 42, 970 ನಸಾಲ ನೀಡಬೇಕೆಂದು ಎಸ್‌ಬಿಐಗೆ ಅರ್ಜಿಸಲ್ಲಿಸಿದ್ದರು. ಆದರೆ ಇದೊಂದು ಮಾನ್ಯತೆಯಿರುವ ಹಬ್ಬವಲ್ಲ ಎಂದು ಹೇಳಿ ಎಸ್‌ಬಿಐ ಅರ್ಜಿಯನ್ನು ತಳ್ಳಿದೆ.
ಈ ಹಿಂದೆ ವಸಂತ ಪಂಚಮಿ ಆಚರಣೆಗಾಗಿ ಮುಂಗಡ ಸಂಬಳ ನೀಡಬೇಕೆಂದು ಸಿಂಗ್ ಅರ್ಜಿ ಸಲ್ಲಿಸಿದ್ದು, ಬ್ಯಾಂಕ್ ಅದನ್ನು ಪರಿಗಣಿಸಿತ್ತು.
ಈ ಬಗ್ಗೆ ಮಾಧ್ಯಮವೊಂದರಲ್ಲಿ ಮಾತನಾಡಿದ ಸಿಂಗ್, ನಾನು ಪ್ರಚಾರಕ್ಕೋಸ್ಕರ ಈ ಅರ್ಜಿ ಸಲ್ಲಿಸಿಲ್ಲ. ಬ್ಯಾಂಕ್ ನ ನಿರ್ಧಾರದ ಬಗ್ಗೆಯೂ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Gujaratಗುಜರಾತ್State Bank of Indiaಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವ್ಯಾಲೆಂಟೈನ್ಸ್ ಡೇprobationary officerValentine’s Dayಪ್ರೊಬೆಷನರಿ ಆಫೀಸರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


