ದಾಳಿ ವೇಳೆ ವಶಪಡಿಸಿಕೊಂಡ ದಾಖಲೆ ಸಿಬಿಐ ಹಿಂದಿರುಗಿಸಬೇಕಿಲ್ಲ: ದೆಹಲಿ ಹೈಕೋರ್ಟ್
ದೆಹಲಿ ಮುಖ್ಯಕಾರ್ಯದರ್ಶಿಗಳ ಕಚೇರಿ ಮೇಲಿನ ಸಿಬಿಐ ದಾಳಿ ಪ್ರಕರಣ ಸಂಬಂಧ ದೆಹಲಿ ಸರ್ಕಾರಕ್ಕೆ ಮತ್ತೆ ಭಾರಿ ಹಿನ್ನಡೆಯಾಗಿದ್ದು, ದಾಳಿ ವೇಳೆ ಸಿಬಿಐ ಅಧಿಕಾರಿಗಳು ವಶಪಡಿಸಿಕೊಂಡಿದ್ದ ದಾಖಲೆಗಳನ್ನು...

ನವದೆಹಲಿ: ದೆಹಲಿ ಮುಖ್ಯಕಾರ್ಯದರ್ಶಿಗಳ ಕಚೇರಿ ಮೇಲಿನ ಸಿಬಿಐ ದಾಳಿ ಪ್ರಕರಣ ಸಂಬಂಧ ದೆಹಲಿ ಸರ್ಕಾರಕ್ಕೆ ಮತ್ತೆ ಭಾರಿ ಹಿನ್ನಡೆಯಾಗಿದ್ದು, ದಾಳಿ ವೇಳೆ ಸಿಬಿಐ ಅಧಿಕಾರಿಗಳು ವಶಪಡಿಸಿಕೊಂಡಿದ್ದ ದಾಖಲೆಗಳನ್ನು ಸರ್ಕಾರಕ್ಕೆ ಹಿಂದಿರುಗಿಸಬೇಕಿಲ್ಲ ಎಂದು ಹೇಳಿದೆ.
ಈ ಹಿಂದೆ ದೆಹಲಿ ಮುಖ್ಯಮಂತ್ರಿಯ ಮುಖ್ಯಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಚೇರಿ ಮೇಲೆ ದಾಳಿ ಮಾಡಿದ್ದ ಸಿಬಿಐ ಅಧಿಕಾರಿಗಳು ವಶಪಡಿಸಿಕೊಂಡಿದ್ದ ದಾಖಲೆಗಳನ್ನು ಹಿಂತಿರುಗಿಸುವಂತೆ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ಇದೇ ವೇಳೆ ರದ್ದು ಪಡಿಸಿದೆ. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ತೇಜಿ ಅವರ ನೇತೃತ್ವದ ನ್ಯಾಯಪೀಠ "ವಿಚಾರಣಾ ನ್ಯಾಯಾಲಯವು ತನ್ನ ವ್ಯಾಪ್ತಿಯನ್ನು ಮೀರಿ ಆದೇಶ ನೀಡಿದೆ. ಅಲ್ಲದೆ ಆದೇಶದಲ್ಲಿ ಸ್ವಯಂ-ದ್ವಂದ್ವ ಕಾರಣಗಳಿವೆ ಎಂದು ಹೇಳಿ ವಿಚಾರಣಾ ನ್ಯಾಯಾಲಯದ ಆದೇಶ ರದ್ದು ಮಾಡಿದೆ. ಅಂತೆಯೇ ಸಿಬಿಐ ಮೇಲ್ಮನವಿಯನ್ನು ಅಂಗೀಕರಿಸಲಾಗಿದೆ ಎಂದು ಪೀಠ ಹೇಳಿದೆ.
ವಿಚಾರಣಾ ನ್ಯಾಯಾಲದ ಆದೇಶವನ್ನು ಪ್ರಶ್ನಿಸಿದ್ದ ಸಿಬಿಐ ಅಧಿಕಾರಿಗಳು, ಫೆಬ್ರುವರಿ 1ರಂದು ದೆಹಲಿ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯಲ್ಲಿ ಸಿಬಿಐ, ವಶಪಡಿಸಿಕೊಂಡಿರುವ ದಾಖಲೆಗಳು ಆಪ್ ಸರ್ಕಾರದ ಕಾರ್ಯನಿರ್ವಹಣೆಗೆ ಯಾವುದೇ ರೀತಿಯಿಂದಲೂ ಅಡಚಣೆ ಉಂಟು ಮಾಡುವುದಿಲ್ಲ. ಪ್ರಾಥಮಿಕ ಹಂತದಲ್ಲಿ ತನಿಖೆಗೆ ಅಡ್ಡಿಯಾಗದಂತೆ ನೋಡಿಕೊಳ್ಳುವ ಸಲುವಾಗಿ ದಾಖಲೆಗಳು ಮತ್ತು ತನಿಖೆಗೆ ಇರುವ ಪ್ರಸ್ತುತತೆಯನ್ನು ಬಹಿರಂಗ ಪಡಿಸಲಾಗುವುದಿಲ್ಲ ಎಂದು ತಿಳಿಸಿತ್ತು. ಸಿಬಿಐ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದು ಮಾಡಿ, ಸಿಬಿಐ ಮೇಲ್ಮನವಿಯನ್ನು ಅಂಗೀಕರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


