ಶ್ರೀಲಂಕಾ ನೌಕಾಪಡೆಯಿಂದ 12 ತಮಿಳುನಾಡು ಮೀನುಗಾರರ ಬಂಧನ
ಕಚತಿವುನಲ್ಲಿ ಮೀನುಗಾರಿಕೆ ನಡೆಸುತ್ತಿದ್ದವರು ಜಲಗಡಿ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಶ್ರೀಲಂಕಾ ನೌಕಾಪಡೆ ತಮಿಳುನಾಡಿನ 12 ಮೀನುಗಾರರನ್ನು ಗುರುವಾರ ಬಂಧನಕ್ಕೊಳಪಡಿಸಿದೆ...

ರಾಮೇಶ್ವರಂ: ಕಚತಿವುನಲ್ಲಿ ಮೀನುಗಾರಿಕೆ ನಡೆಸುತ್ತಿದ್ದವರು ಜಲಗಡಿ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಶ್ರೀಲಂಕಾ ನೌಕಾಪಡೆ ತಮಿಳುನಾಡಿನ 12 ಮೀನುಗಾರರನ್ನು ಗುರುವಾರ ಬಂಧನಕ್ಕೊಳಪಡಿಸಿದೆ.
ಬಂಧಿತೆರೆಲ್ಲರೂ ತಮಿಳುನಾಡು ಮೂಲದವರಾಗಿದ್ದು, ಶ್ರೀಲಂಕಾಕ್ಕೆ ಸೇರಿದ ಕಚ್ ತಿವ್ ಪ್ರಾಂತ್ಯದಲ್ಲಿ ಮೀನುಗಾರಿಕೆ ನಡೆಸುತ್ತಿದ್ದರೆಂದು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬೋಟ್ ನಲ್ಲಿ ಬಂದ ಲಂಕಾ ನೌಕಾಪಡೆಯ ಸಿಬ್ಬಂದಿಗಳು 12 ಮೀನುಗಾರರನ್ನು ಮತ್ತು ಮೀನುಗಾರಿಕೆಗೆ ಬಳಿಸಿದ 2 ಬೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಎಲ್ಲಾ ಮೀನುಗಾರರನ್ನು ತಲೈಮನ್ನಾರ್ ಗೆ ಕರೆದುಕೊಂಡು ಹೋಗಿದ್ದಾರೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


