ದೇಶ

ರೈತ ಗಜೇಂದ್ರ ಆತ್ಮಹತ್ಯೆಗೆ ಪ್ರಚೋದನೆ: ಎಎಪಿ ನಾಯಕರಿಗೆ ಸಮನ್ಸ್ ಜಾರಿ

ರಾಜಸ್ಥಾನದ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪದ ಮೇಲೆ ಆಮ್ ಆದ್ಮಿ ಪಕ್ಷ...

ರೈತ ಗಜೇಂದ್ರ ಆತ್ಮಹತ್ಯೆಗೆ ಪ್ರಚೋದನೆ: ಎಎಪಿ ನಾಯಕರಿಗೆ ಸಮನ್ಸ್ ಜಾರಿ
ಸಂಜಯ್ ಸಿಂಗ್- ಕುಮಾರ್ ವಿಶ್ವಾಸ್
Published On :
ನವದೆಹಲಿ: ರಾಜಸ್ಥಾನದ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪದ ಮೇಲೆ ಆಮ್ ಆದ್ಮಿ ಪಕ್ಷ(ಎಎಪಿ)ದ ನಾಯಕರಿಗೆ ಸಮನ್ಸ್ ಜಾರಿ ಮಾಡಲಾಗಿದೆ. 
ಎಎಪಿ ನಾಯಕರಾದ ಸಂಜಯ್ ಸಿಂಗ್, ಕುಮಾರ್ ವಿಶ್ವಾಸ್ ಮತ್ತು ಆಶಿಶ್ ಖೆತನ್, ಪಂಜಾಬ್ ನ ಸಂಸದ ಭಗವಂತ್ ಮನ್ ಮತ್ತು ನೀರಜ್ ಪಾಂಡೆ ಅವರಿಗೆ ದೆಹಲಿ ಪೊಲೀಸರು ಸಮನ್ಸ್ ನೀಡಿದ್ದಾರೆ.
ಕೇಂದ್ರ ಗೃಹ ಸಚಿವಾಲಯಕ್ಕೆ ದೆಹಲಿ ಪೊಲೀಸರು ನೀಡಿದ ವರದಿಯಲ್ಲಿ, ಎಎಪಿ ನಾಯಕರು ಪ್ರಚೋದನೆ ಮಾಡುತ್ತಿದ್ದರು. ಈ ವೇಳೆ ರ್ಯಾಲಿಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತ ಗಜೇಂದ್ರ ಸಿಂಗ್ ಆತ್ಮಹತ್ಯೆಗೆ ಪ್ರಚೋದನೆ ನೀಡುತ್ತಿದ್ದರು ಎಂದು ಹೇಳಲಾಗಿದೆ. 
ಏಪ್ರಿಲ್ 22ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ಭೂಸ್ವಾಧೀನ ಮಸೂದೆ ವಿರೋಧಿಸಿ ಎಎಪಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.