ದೇಶ

ಮಾಜಿ ಎಂಎಲ್ ಸಿ ಬಳಿ ಇದೆ 10,000 ಕೋಟಿ ಕಪ್ಪು ಹಣ?

ಬಿಎಸ್ಪಿಯ ಮಾಜಿ ವಿಧಾನಪರಿಷತ್‌ ಸದಸ್ಯ ಮೊಹಮ್ಮದ್‌ ಇಕ್ಬಾಲ್, ಇದೀಗ 10 ಸಾವಿರ ಕೋಟಿ ರು. ಕಪ್ಪು ಹಣ ಹೊಂದಿರುವ ಆರೋಪಕ್ಕೆ ಸಿಲುಕಿದ್ದಾರೆ.

ಮಾಜಿ ಎಂಎಲ್ ಸಿ ಬಳಿ ಇದೆ 10,000 ಕೋಟಿ ಕಪ್ಪು ಹಣ?
ಸಾಂದರ್ಭಿಕ ಚಿತ್ರ
Published On :

ನವದೆಹಲಿ:  6 ವರ್ಷಗಳ ಹಿಂದೆ ಚುನಾವಣಾ ಆಯೋಗಕ್ಕೆ 6.5 ಕೋಟಿ ರೂ. ಆಸ್ತಿ ಹೊಂದಿರುವುದಾಗಿ ಪ್ರಮಾಣ ಪತ್ರ ಸಲ್ಲಿಸಿದ್ದ ಬಿಎಸ್ಪಿಯ ಮಾಜಿ ವಿಧಾನಪರಿಷತ್‌ ಸದಸ್ಯ ಮೊಹಮ್ಮದ್‌ ಇಕ್ಬಾಲ್, ಇದೀಗ 10 ಸಾವಿರ ಕೋಟಿ ರೂ. ಕಪ್ಪು ಹಣ ಹೊಂದಿರುವ ಆರೋಪಕ್ಕೆ ಸಿಲುಕಿದ್ದಾರೆ.

ಸುಪ್ರೀಂಕೋರ್ಟ್‌ಗೆ ಈ ಸಂಬಂಧ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದ ವಿಚಾರಣೆ ವೇಳೆ, ಮೊಹಮ್ಮದ್‌ ಇಕ್ಬಾಲ್‌ ಅವರ ವಿರುದ್ಧದ ಕಪ್ಪು ಹಣ ಗಳಿಕೆ ಆರೋಪ ಕುರಿತು ವಿವಿಧ ತನಿಖಾ ಸಂಸ್ಥೆಗಳಿಂದ ವಿಚಾರಣೆಗೆ ಆದೇಶಿಸಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಇಕ್ಬಾಲ್‌ ಅವರು 10 ಸಾವಿರ ಕೋಟಿ ರೂ. ಕಪ್ಪು ಹಣ ಗಳಿಸಿದ್ದು, ಅದನ್ನು ಸಕ್ರಮ ಗೊಳಿಸಿಕೊಳ್ಳಲು 111 ನಕಲಿ ಕಂಪನಿಗಳನ್ನು ದೇಶ ಹಾಗೂ ವಿದೇಶಗಳಲ್ಲಿ ಅತ್ಯಂತ ಕಡಿಮೆ ಮೊತ್ತಕ್ಕೆ ಸ್ಥಾಪಿಸಿದ್ದಾರೆ. ಬಳಿಕ ಅದರಿಂದ ತಮಗೆ ಕೋಟ್ಯಂತರ ರೂ. ಲಾಭ ಹೊಂದಿದೆ ಎಂದು ಬಿಂಬಿಸುತ್ತಿದ್ದಾರೆ ಎಂದು ರಣವೀರ್‌ ಸಿಂಗ್‌ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.