ದೇಶ

ಸಂಜೆ 4.30ಕ್ಕೆ ಹುತಾತ್ಮ ಕೊಪ್ಪದ್ ಗೆ ಭಾರತೀಯ ಸೇನೆಯಿಂದ ಅಂತಿಮ ನಮನ

ಸಿಯಾಚಿನ್ ನ ಭೀಕರ ಹಿಮಪಾತದಲ್ಲಿ ಸಿಲುಕಿ ಜೀವನ್ಮರಣ ಹೋರಾಟ ನಡೆಸಿ ಇಂದು ದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಹುತಾತ್ಮರಾದ ಕರ್ನಾಟಕದ ಯೋಧ...

ಸಂಜೆ 4.30ಕ್ಕೆ ಹುತಾತ್ಮ ಕೊಪ್ಪದ್ ಗೆ ಭಾರತೀಯ ಸೇನೆಯಿಂದ ಅಂತಿಮ ನಮನ
ಹನುಮಂತಪ್ಪ ಕೊಪ್ಪದ್(ಸಾಂದರ್ಭಿಕ ಚಿತ್ರ)
Published On :

ನವದೆಹಲಿ: ಸಿಯಾಚಿನ್ ನ ಭೀಕರ ಹಿಮಪಾತದಲ್ಲಿ ಸಿಲುಕಿ ಜೀವನ್ಮರಣ ಹೋರಾಟ ನಡೆಸಿ ಇಂದು ದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಹುತಾತ್ಮರಾದ ಕರ್ನಾಟಕದ ಯೋಧ ಹನುಮಂತಪ್ಪ ಕೊಪ್ಪದ್ ಅವರಿಗೆ ಭಾರತೀಯ ಸೇನೆ ಅಂತಿಮ ನಮನ ಸಲ್ಲಿಸಲಿದೆ.

ದೆಹಲಿಯ ಪರೇಡ್ ಮೈದಾನದಲ್ಲಿ ಹನುಮಂತಪ್ಪ ಕೊಪ್ಪದ್ ಅವರ ಅಂತಿಮ ದರ್ಶನಕ್ಕೆ ಅಣಿ ಮಾಡಲಾಗಿದ್ದು, ಸಂಜೆ 4.30ಕ್ಕೆ ಭಾರತೀಯ ಸೇನೆ ಅಧಿಕಾರಿಗಳು, ರಕ್ಷಣಾ ಸಚಿವರು, ಸೇನಾ ಮುಖ್ಯಸ್ಥರು, ಸೇನಾಪಡೆಗಳು ಅಂತಿಮ ನಮನ ಸಲ್ಲಿಸಲಿದ್ದಾರೆ.

ಭಾರತೀಯ ಸೇನೆಯ ಅಂತಿಮ ನಮನದ ಬಳಿಕ ಹುತಾತ್ಮ ಯೋಧ ಹನುಮಂತಪ್ಪ ಕೊಪ್ಪದ್ ಅವರ ಪಾರ್ಥಿವ ಶರೀರವನ್ನು ಕರ್ನಾಟಕ್ಕೆ ರವಾನಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.