ದೇಶ

ನಾಚಿಕೆ ಇದ್ದರೆ ಸೋನಿಯಾ, ರಾಹುಲ್ ದೇಶದ ಜನತೆ ಕ್ಷಮೆ ಕೇಳಲಿ: ಬಿಜೆಪಿ

ನರೇಂದ್ರ ಮೋದಿ ಅವರ ವಿರುದ್ಧ ಅಪ ಪ್ರಚಾರ ಮಾಡಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ದೇಶದ ಜನತೆಯ ಕ್ಷಮೆ ಕೇಳಬೇಕು ...

ನಾಚಿಕೆ ಇದ್ದರೆ ಸೋನಿಯಾ, ರಾಹುಲ್ ದೇಶದ ಜನತೆ ಕ್ಷಮೆ ಕೇಳಲಿ: ಬಿಜೆಪಿ
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ
Published On :

ನವದೆಹಲಿ: 2004 ರಲ್ಲಿ ನಡೆದ ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅಪ ಪ್ರಚಾರ ಮಾಡಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ದೇಶದ ಜನತೆಯ ಕ್ಷಮೆ ಕೇಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಮುಂಬಯಿ ಕೋರ್ಟ್ ವಿಚಾರಣೆ ವೇಳೆ ಇಶ್ರತ್ ಜಹಾನ್ ಎಲ್ ಇಟಿ ಉಗ್ರಳಾಗಿದ್ದಳು ಎಂಬ ಸ್ಫೋಟಕ ಮಾಹಿತಿಯನ್ನು ಉಗ್ರ ಡೇವಿಡ್ ಹೆಡ್ಲಿ ಬಹಿರಂಗ ಪಡಿಸಿದ ಮೇಲೆ ಕಾಂಗ್ರೆಸ್ ಹಾಗೂ ಎಡ ಪಕ್ಷಗಳು ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆಗ್ರಹಿಸಿದ್ದಾರೆ.

ಈ ಹಿಂದೆ ಅಧಿಕಾರದಲ್ಲಿದ್ದ ಕೇಂದ್ರದ ಯುಪಿಎ ಸರ್ಕಾರ ಭಯೋತ್ಪಾದನೆ ಮಟ್ಟ ಹಾಕುವಲ್ಲಿ ವಿಫಲವಾಗಿತ್ತು ಎಂದು ಬಿಜೆಪಿ ವಕ್ತಾರ ಶಹನವಾಜ್ ಹುಸೇನ್ ಆರೋಪಿಸಿದ್ದಾರೆ. ಇಸ್ರತ್ ಜಹಾನ್ ಬಿಹಾರ್ ಕಾ ಬೇಟಿ ಎಂದು ಹೇಳಿ ನಿತೀಶ್ ಕುಮಾರ್ ಬಿಹಾರ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಹೇಳಿದ್ದರು ಎಂದು ಅವರು ವ್ಯಂಗ್ಯವಾಡಿದ್ದಾರೆ.

ಸೋನಿಯಾ ಹಾಗೂ ರಾಹುಲ್ ಗಾಂಧಿಗೆ ನಾಚಿಕೆ ಇದ್ದರೆ ಅವರು ದೇಶದ ಕ್ಷಮೆ ಕೇಳಬೇಕು ಎಂದು ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ಶರ್ಮಾ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.