ನ್ಯಾಷನಲ್ ಹೆರಾಲ್ಡ್: ಸೋನಿಯಾ, ರಾಹುಲ್ ಗೆ ಹಾಜರಾತಿ ವಿನಾಯ್ತಿ ನೀಡಿದ "ಸುಪ್ರೀಂ"
ಬಹುಕೋಟಿ ಅಕ್ರಮದ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಾತ್ಕಾಲಿಕ ರಿಲೀಫ್ ನೀಡಿದೆ...

ನವದೆಹಲಿ: ಬಹುಕೋಟಿ ಅಕ್ರಮದ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಾತ್ಕಾಲಿಕ ರಿಲೀಫ್ ನೀಡಿದೆ.
ಪ್ರಕರಣ ಸಂಬಂಧ ನಡೆಯುತ್ತಿರುವ ವಿಚಾರಣೆಗೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಖುದ್ದಾಗಿ ಹಾಜರಾಗುವ ಅವಶ್ಯಕತೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ನಡೆದ ವಿಚಾರಣೆಯಲ್ಲಿ ಹೇಳಿದೆ. ಆದರೆ ಪ್ರಕರಣದ ವಿಚಾರಣೆಯನ್ನು ಮಾತ್ರ ಸ್ಥಗಿತಗೊಳಿಸಲು ನ್ಯಾಯಾಲಯ ನಿರಾಕರಿಸಿದೆ. ಈ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ವಿಚಾರಣಾ ನ್ಯಾಯಾಲಯ ಸೋನಿಯಾ ಮತ್ತು ರಾಹುಲ್ ಇಬ್ಬರೂ ನಾಯಕರು ಫೆಬ್ರವರಿ 20ರಂದು ನಡೆಯಲಿರುವ ವಿಚಾರಣೆಗೆ ಖುದ್ದಾಗಿ ಹಾಜರಾಗಬೇಕು ಎಂದು ಸೂಚನೆ ನೀಡಿತ್ತು.
ನ್ಯಾಷನಲ್ ಹೆರಾಲ್ಡ್ ಸಂಸ್ಥೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿಚಾರಣೆಯಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಪಾಟಿಯಾಲಾ ಕೋರ್ಟ್ ನೀಡಲಾಗಿದ್ದ ಸಮನ್ಸ್ ಅನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಹಿನ್ನಲೆಯಲ್ಲಿ ಸೋನಿಯಾ ರಾಹುಲ್ ಪರ ವಕೀಲರು ಫೆಬ್ರವರಿ 4ರಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


