ಆಪ್ ನಾಯಕ ಕುಮಾರ್ ವಿಶ್ವಾಸ್ ಬರ್ತ್ ಡೇ ಪಾರ್ಟಿಯಲ್ಲಿ ಬಿಜೆಪಿ, ಆರೆಸ್ಸೆಸ್ಸ್ ನಾಯಕರು ಭಾಗಿ
ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಆರೆಸ್ಸೆಸ್ಸ್ ನ ...

Published On :
ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಆರೆಸ್ಸೆಸ್ಸ್ ನ ಇಬ್ಬರು ಹಿರಿಯ ನಾಯಕರು ಭಾಗವಹಿಸಿದ್ದಾರೆ.
ಆರೆಸ್ಸೆಸ್‌ನ ಹಿರಿಯ ನಾಯಕರಾದ ರಾಮ್‌ಲಾಲ್ ಮತ್ತು ಓಮ್ ಮಾಥೂರ್, ಬಿಜೆಪಿ ನಾಯಕರಾದ ರವಿಶಂಕರ್ ಪ್ರಸಾದ್, ಮನೋಜ್ ತಿವಾರಿ, ವಿಜಯ್ ಗೋಯಲ್, ಸುಧಾಂಶು ತ್ರಿವೇದಿ ಮೊದಲಾದವರು ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಬಿಜೆಪಿಯ ಇಷ್ಟೊಂದು ನಾಯಕರು ಬರ್ತ್‌ಡೇ ಪಾರ್ಟಿಯಲ್ಲಿ ಭಾಗವಹಿಸಿರುವುದರಿಂದ ಕುಮಾರ್ ವಿಶ್ವಾಸ್ ಬಿಜೆಪಿಗೆ ಸೇರಲಿದ್ದಾರೆ ಎಂಬ ಊಹಾಪೋಹಕ್ಕೆ ಸಾಕ್ಷ್ಯ ಸಿಕ್ಕಿದಂತಾಗಿದೆ.
ಆದರೆ ಅಂಥದ್ದೇನೂ ಇಲ್ಲ, ದೋವಲ್ ಸೇರಿದಂತೆ ಇವರೆಲ್ಲವೂ ವಿಶ್ವಾಸ್ ಅವರ ಹಳೇ ಗೆಳೆಯರು ಎಂದು ಕುಮಾರ್ ವಿಶ್ವಾಸ್ ಅವರ ಆಪ್ತರು ಹೇಳಿದ್ದಾರೆ.
ದೆಹಲಿಯ ಸಚಿವ ಸಂಪುಟ ಸಚಿವರು, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಪಕ್ಷದ ಶಾಸಕರೆಲ್ಲರೂ ಆ ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ. ಅದೇ ವೇಳೆ ಕಾಂಗ್ರೆಸ್ ನಾಯಕರಾದ ಕಮಲ್‌ನಾಥ್, ನವಿನ್ ಜಿಂದಾಲ್, ರಾಜೀವ್ ಶುಕ್ಲಾ ಮತ್ತು ದೆಹಲಿ ಪೊಲೀಸ್ ಕಮಿಷನರ್ ಬಿಎಸ್ ಬಸ್ಸೀ ಕೂಡಾ ಹುಟ್ಟುಹಬ್ಬದಾಚರಣೆಯಲ್ಲಿ ಭಾಗಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


