ಜೆಎನ್‌ಯು ವಿವಾದ: ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತದೆ ಎಂದ ಎಡಪಕ್ಷ
ಈ ಪ್ರತಿಭಟನೆಯಲ್ಲಿ ಭಾಗಿಯಾಗಿ ವಿಶ್ವವಿದ್ಯಾನಿಲಯದ ಶಿಷ್ಟಾಚಾರವನ್ನು ಕಡೆಗಣಿಸಿದ 8 ವಿದ್ಯಾರ್ಥಿಗಳನ್ನು ವಿವಿ ವಜಾ ಮಾಡಿದೆ. ಈ ಎಂಟು ವಿದ್ಯಾರ್ಥಿಗಳನ್ನು ಕಾಲೇಜು ಅಧಿಕೃತರು....

Published On :
ನವದೆಹಲಿ: ಜವಾಹರ್‌ಲಾಲ್ ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ಪಾರ್ಲಿಮೆಂಟ್ ದಾಳಿ ಮಾಡಿದ ಅಪರಾಧಿ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ್ದನ್ನು ಪ್ರಶ್ನಿಸಿ, ದೇಶವಿರೋಧಿ ಘೋಷಣೆ ಕೂಗಿ ವಿದ್ಯಾರ್ಥಿಗಳ ಸಂಘಟನೆಯೊಂದು ಪ್ರತಿಭಟನೆ ನಡೆಸಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ವಿದ್ಯಾರ್ಥಿ ಸಂಘಟನೆಯ ನಾಯಕನನ್ನು ಶುಕ್ರವಾರ ಬಂಧಿಸಿದ್ದಾರೆ.
ಅದೇ ವೇಳೆ ಈ ಪ್ರತಿಭಟನೆಯಲ್ಲಿ ಭಾಗಿಯಾಗಿ ವಿಶ್ವವಿದ್ಯಾನಿಲಯದ ಶಿಷ್ಟಾಚಾರವನ್ನು ಕಡೆಗಣಿಸಿದ 8 ವಿದ್ಯಾರ್ಥಿಗಳನ್ನು ವಿವಿ ವಜಾ ಮಾಡಿದೆ. ಈ ಎಂಟು ವಿದ್ಯಾರ್ಥಿಗಳನ್ನು ಕಾಲೇಜು ಅಧಿಕೃತರು ತನಿಖೆಗೊಳಪಡಿಸಲಿದ್ದು ಅಲ್ಲಿಯವರಗೆ ಇವರು ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ವಿವಿ ನಿರ್ಬಂಧ ಹೇರಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಜೆಎನ್‌ಯುನಲ್ಲಿ ಏನು ನಡೆಯುತ್ತಿದೆ? ಪೊಲೀಸರು ಕ್ಯಾಂಪಸ್‌ಗೆ ಬಂದು ಹಾಸ್ಟೆಲ್ ನಿಂದ ವಿದ್ಯಾರ್ಥಿಗಳನ್ನು ಬಂಧಿಸುತ್ತಿದ್ದಾರೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಹೀಗೇ ಆಗಿತ್ತು ಎಂದು ಟ್ವೀಟ್ ಮಾಡಿದ್ದಾರೆ.
ಅದೇ ವೇಳೆ ಎಡ ಪಂಥೀಯ ವಿದ್ಯಾರ್ಥಿ ಸಂಘಟನೆಗಳ ನೇತಾರರ ಬಂಧನವನ್ನು ಖಂಡಿಸಿದ ಸಿಪಿಎಂ, ಕ್ಯಾಂಪಸ್ ನೊಳಗೆ ಪೊಲೀಸರು ಬಂದು ವಿದ್ಯಾರ್ಥಿಗಳನ್ನು ಬಂಧಿಸುವ ಪ್ರಕ್ರಿಯೆ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಡೆದಿತ್ತು. ಜೆಎನ್‌ಯು ನ ಈ ಘಟನೆಗಳು ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತದೆ ಎಂದು ಹೇಳಿಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


