ಅನುಕೂಲಕ್ಕೆ ತಕ್ಕಂತೆ ಉಗ್ರ ಸಂಘಟನೆಗಳಿಂದ ಧರ್ಮದ ಬಳಕೆ: ಕೇಂದ್ರ ಸಚಿವ ನಖ್ವಿ
ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ(ಇಸಿಸ್) ಹಾಗೂ ಅಲ್ ಖೈದಾ ಉಗ್ರ ಸಂಘಟನೆಗಳಿಗೆ ಯಾವುದೇ ಧರ್ಮವಿಲ್ಲ. ತಮ್ಮ ಅನುಕೂಲಕ್ಕೆ ತಕ್ಕಂತೆ...

ಕಂಭತ್(ಗುಜರಾತ್): ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ(ಇಸಿಸ್) ಹಾಗೂ ಅಲ್ ಖೈದಾ ಉಗ್ರ ಸಂಘಟನೆಗಳಿಗೆ ಯಾವುದೇ ಧರ್ಮವಿಲ್ಲ. ತಮ್ಮ ಅನುಕೂಲಕ್ಕೆ ತಕ್ಕಂತೆ ಉಗ್ರ ಸಂಘಟನೆಗಳು ಧರ್ಮವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ತಿಳಿಸಿದ್ದಾರೆ.
ಇಸಿಸ್, ಅಲ್ ಖೈದಾ ಮತ್ತು ಇತರೆ ಉಗ್ರ ಸಂಘಟನೆಗಳು ಮಾನವತೆ ಮತ್ತು ಜಗತ್ತಿನ ಏಳಿಗೆಯ ವಿರೋಧಿಗಳು. ಇಂತಹ ಉಗ್ರವಾದವನ್ನು ತಡೆಯಲು ಸರ್ಕಾರಕ್ಕಿಂತಲೂ ಸಮಾಜ ಹೆಚ್ಚಿನ ಪಾತ್ರ ವಹಿಸಬೇಕಿದೆ. ಕೆಲವೊಂದು ಧಾರ್ಮಿಕ ಸಂಸ್ಥೆಗಳು ತಮ್ಮ ದುಬೋಧನೆಯಿಂದ ಯುವಜನತೆಯನ್ನು ಉಗ್ರವಾದದೆಡೆಗೆ ಸೆಳೆಯುತ್ತಿವೆ. ನಾವು ಒಟ್ಟಿಗೆ ಸೇರಿ ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡಬೇಕಿದೆ ಎಂದು ನಖ್ವಿ ಅಭಿಪ್ರಾಯ ಪಟ್ಟಿದ್ದಾರೆ.
ಧಾರ್ಮಿಕ ಸಂಸ್ಥೆಗಳು ಮತ್ತು ಅದರ ಮುಖಂಡರು ಉಗ್ರವಾದವನ್ನು ಒಟ್ಟಾಗಿ ವಿರೋಧಿಸಬೇಕು. ದೇಶದ ಶಾಂತಿ ಕದಡಲು ಹೊರಟಿರುವವರಿಗೆ ಸಮಾಜ ಬೆಂಬಲ ನೀಡಬಾರದು, ಅವರನ್ನು ಒಂಟಿ ಮಾಡುವ ಮೂಲಕ ದೇಶದಲ್ಲಿ ಉಗ್ರವಾದಕ್ಕೆ ಸ್ಥಳವಿಲ್ಲ ಎಂಬುದನ್ನು ಅವರಿಗೆ ಮನದಟ್ಟು ಮಾಡಿಕೊಡಬೇಕು ಎಂದು ನಖ್ವಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


