ದೇಶ

ಮೀಸಲಾತಿ ಪ್ರವೇಶಕ್ಕೆ ಅನುಮತಿ ಇಲ್ಲ: ಕೇಜ್ರಿವಾಲ್

ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ವರ್ಷ ಪೂರ್ಣಗೊಂಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಂತಸದಲ್ಲಿದ್ದಾರೆ...

ಮೀಸಲಾತಿ ಪ್ರವೇಶಕ್ಕೆ ಅನುಮತಿ ಇಲ್ಲ: ಕೇಜ್ರಿವಾಲ್
ಮೀಸಲಾತಿ ಪ್ರವೇಶಕ್ಕೆ ಅನುವು ಮಾಡಿಕೊಡುವುದಿಲ್ಲ: ಕೇಜ್ರಿವಾಲ್
Published On :
ನವದೆಹಲಿ: ಶೈಕ್ಷಣಿಕ ಸಂಸ್ಥೆಗಳಲ್ಲಿ ಮೂಲಭೂತ ವ್ಯವಸ್ಥೆಗಳನ್ನು ಅಭಿವೃದ್ಧಿ ಕಾಣಬೇಕಿದ್ದು, ದೆಹಲಿ ಶಾಲೆಗಳಲ್ಲಿ ಮೀಸಲಾತಿ ಪ್ರವೇಶಗಳಿಗೆ ಅನುಮತಿ ನೀಡುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರು ಭಾನುವಾರ ಹೇಳಿದ್ದಾರೆ. 
ದೆಹಲಿ ಆಡಳಿತಾರೂಢ ಆಮ್ ಆದ್ಮಿ ಸರ್ಕಾರಕ್ಕೆ 1 ವರ್ಷದ ತುಂಬಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಅಧಿಕಾರಕ್ಕೆ ಬಂದಾಗ ನಮ್ಮ ಸರ್ಕಾರ ಅಗ್ಗದ ಬೆಲೆ ನೀರು ನೀಡುವುದಾಗಿ ಹೇಳಿತ್ತು. ಸರ್ಕಾರ ಆ ಬಗ್ಗೆ ಕೆಲಸ ಮಾಡುತ್ತಿದ್ದು, ಶೀಘ್ರದಲ್ಲೇ ಜನರಿಗೆ ಇದರ ಫಲ ದೊರಕಲಿದೆ. ಅಲ್ಲದೆ, ಅನಧಿಕೃತ ಕಾಲೋನಿಗಳಿಗೂ ನೀರಿನ ಸಂಪರ್ಕವನ್ನು ನೀಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ದೆಹಲಿಯ ಹಲವು ಪ್ರದೇಶಗಳಲ್ಲಿ ನೀರು ಸೋರಿಕೆಯಾಗುತ್ತಿದ್ದು, ಈ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದೆ. ಕುಡಿಯುವ ನೀರನ್ನು ಮತ್ತಷ್ಟು ಶುದ್ಧ, ಸುರಕ್ಷತೆಯಿಂದ ಜನರಿಗೆ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ಬಗ್ಗೆಯೂ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. 
ಸಿಎಜಿ ಅಕ್ರಮ ಬಯಲಿಗೆ ಬರುತ್ತಿದ್ದಂತೆ ಡಿಸ್ಕಾಂ (ವಿದ್ಯುತ್ ವಿತರಣಾ ಕಂಪನಿ) ಕಂಪನಿಗಳಲ್ಲಿನ ಅಕ್ರಮಗಳು ಬಯಲಿಗೆ ಬಂದಿತ್ತು. ಈ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಸುಪ್ರೀನಲ್ಲಿ ನಮಗೆ ಗೆಲವು ಸಿಗಲಿದೆ ಎಂಬುದರ ಬಗ್ಗೆ ನಮಗೆ ವಿಶ್ವಾಸವಿದೆ. ಸುಪ್ರೀಂ ಆದೇಶದ ನಂತರ ವಿದ್ಯುತ್ ದರ ಕೂಡ ಕಡಿಮೆಯಾಗಿಲಿದೆ. 
ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿನ ಮೂಲಭೂತ ಸೌಕರ್ಯಗಳು ಅಭಿವೃದ್ಧಿ ಕಾಣಬೇಕಿದ್ದು, ಈ ಬಗ್ಗೆ ಉಪ ಮುಖ್ಯಮಂತ್ರಿಯವರು ಕಾರ್ಯನಿರ್ವಹಿಸುತ್ತಿದ್ದಾರೆ. ದೈನಿಕ ಕಾರ್ಯನಿರ್ವಹಿಸುತ್ತಿರುವ ಎರಡು ಶಾಲೆಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಇದಲ್ಲದೆ, 8000 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು, ಈಗಾಗಲೇ ನಿರ್ಮಿತವಾಗಿರುವ ಶಾಲಾ ಕೊಠಡಿಗಳಲ್ಲಿ 40 ರಿಂದ 50 ವಿದ್ಯಾರ್ಥಿಗಳಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಮ್ಮ ಸರ್ಕಾರ ಮೀಸಲಾತಿ ಪ್ರವೇಶಕ್ಕೆ ಅನುವು ಮಾಡಿಕೊಡುವುದಿಲ್ಲ ಎಂದು ಹೇಳಿದ್ದಾರೆ. 
ಇನ್ನು ಆರೋಗ್ಯ ಇಲಾಖೆ ಕೂಡ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧಿಗಳನ್ನು ವಿತರಿಸಲಾಗುತ್ತಿದೆ. ಈ ಬಗ್ಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ 3000 ವೈದ್ಯರೊಂದಿಗೆ ಮಾತನಾಡಲಾಗಿತ್ತು. ವೈದ್ಯರು ಹೇಳುವ ಪ್ರಕಾರ ಪ್ರತಿಯೊಂದು ಆಸ್ಪತ್ರೆಯಲ್ಲಿಯೂ ಉಚಿತ ಔಷಧಿಗಳನ್ನು ನೀಡಬಹುದೆಂದು ಅವರು ತಿಳಿಸಿದ್ದಾರೆ. 
ದೆಹಲಿಯಲ್ಲಿ ಮೂರು ಹಂತದ ವೈದ್ಯಕೀಯ ವ್ಯವಸ್ಥೆಯನ್ನು ರೂಪಿಸಲಾಗುತ್ತಿದ್ದು, ಪ್ರತಿಯೊಂದು ಪ್ರದೇಶದಲ್ಲೂ ಕ್ಲಿನಿಕ್ ಗಳನ್ನು ತೆರೆಯಲಾಗುತ್ತಿದೆ. ಈ ಕ್ಲಿನಿಕ್ ಗಳು ಉತ್ತಮ ಸೌಲಭ್ಯಗಳನ್ನೊಳಗೊಂಡಿರುತ್ತದೆ. ಇದರಿಂದ ಸಾರ್ವಜನಿಕರು ಇದರ ಸೌಲಭ್ಯಗಳನ್ನು ಸುಲಭವಾಗಿ ಪಡೆಯಬಹುದು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.