ದೇಶ

ವಿತ್ತ ಸಚಿವರಾಗಿ ಮನಮೋಹನ್ ಸಿಂಗ್ ಗ್ರೇಟ್, ಪ್ರಧಾನಿಯಾಗಿ ಅಲ್ಲ: ಜೇಟ್ಲಿ

ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ವಿತ್ತ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಆದರೆ ಪ್ರಧಾನಿಯಾದ ನಂತರ ಅವರು ಅಭಿವೃದ್ಧಿ ಕೆಲಸಗಳನ್ನು...

ವಿತ್ತ ಸಚಿವರಾಗಿ ಮನಮೋಹನ್ ಸಿಂಗ್ ಗ್ರೇಟ್, ಪ್ರಧಾನಿಯಾಗಿ ಅಲ್ಲ: ಜೇಟ್ಲಿ
ಅರುಣ್ ಜೇಟ್ಲಿ
Published On :
ಮುಂಬೈ: ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ವಿತ್ತ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಆದರೆ ಪ್ರಧಾನಿಯಾದ ನಂತರ ಅವರು ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿದರು ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಭಾನುವಾರ ಹೇಳಿದ್ದಾರೆ.
ನಿನ್ನೆಯಿಂದ ಆರಂಭವಾಗಿರುವ ಮೇಕ್ ಇಂಡಿಯಾ ಸಾಪ್ತಾಹದ ಅಂಗವಾಗಿ ಸಿಎನ್ ಎನ್ ಏಷ್ಯಾ ವ್ಯವಹಾರ ವೇದಿಕೆಯಲ್ಲಿ ಮಾತನಾಡಿದ ಜೇಟ್ಲಿ, 'ನಿಜ ಹೇಳಬೇಕು ಅಂದ್ರೆ ಮನಮೋಹನ್ ಸಿಂಗ್ ಅವರು ವಿತ್ತ ಸಚಿವರಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಆದರೆ ಪ್ರಧಾನಿಯಾದ ಬಳಿಕ ಅವೆಲ್ಲವೂ ಸ್ಥಗಿತಗೊಂಡವು' ಎಂದಿದ್ದಾರೆ.
ನಿನ್ನೆಯಷ್ಟೇ ಕೇಂದ್ರ ಸರ್ಕಾರವನ್ನು ಟೀಕಿಸಿದ್ದ ಮನಮೋಹನ ಸಿಂಗ್ ತಿರುಗೇಟು ನೀಡಿದ್ದ ಜೇಟ್ಲಿ, ‘ಸಿಂಗ್ ಅವರು ತಮ್ಮ ಪಕ್ಷಕ್ಕೆ ನೀಡಬೇಕಾದ ಸಲಹೆಯೇನು?’ಯುಪಿಎ ಸರ್ಕಾರದ ನೀತಿಗಳು ಕಾಂಗ್ರೆಸ್‌ ಪಕ್ಷದ ಕೇಂದ್ರ ಕಚೇರಿಯಲ್ಲಿ ಸಿದ್ಧವಾಗುತ್ತಿದ್ದವು. ಆದರೆ, ಎನ್‌ಡಿಎ ಸರ್ಕಾರದಲ್ಲಿ ಅಂತಿಮ ಮಾತು ಪ್ರಧಾನಿ ಮೋದಿ ಅವರ ದ್ದಾಗಿರುತ್ತದೆ ಎಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.