ಕುಪ್ವಾರ್ ನಲ್ಲಿ ಮೃತಪಟ್ಟ 5 ಉಗ್ರರು ಎಲ್ ಇಟಿಗೆ ಸೇರಿದ ವಿದೇಶಿಯರು
ಜಮ್ಮು ಕಾಶ್ಮೀರದ ಕುಪ್ವಾರನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಮೃತಪಟ್ಟ ಐವರು ಉಗ್ರರು ವಿದೇಶದವರಾಗಿದ್ದು, ಲಷ್ಕರ್ ಇ ತೋಯ್ಬಾ...

Published On :
ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಮೃತಪಟ್ಟ ಐವರು ಉಗ್ರರು ವಿದೇಶದವರಾಗಿದ್ದು, ಲಷ್ಕರ್ ಇ ತೋಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.
ಐವರು ಉಗ್ರರು ಬಳಸಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆ ಶಸ್ತ್ರಾಸ್ತ್ರಗಳು ಎಲ್ ಇಟಿ ಸಂಘಟನೆಯದ್ದಾಗಿದೆ ಎಂದು ಜನರಲ್ ಕಮಾಂಡಿಂಗ್ ಅಧಿಕಾರಿ ಸತೀಶ್ ದುವಾ ಹೇಳಿದ್ದಾರೆ.
ಗುಂಡಿನ ಕಾಳಗದಲ್ಲಿ ಮೃತಪಟ್ಟ ಇಬ್ಬರು ಯೋಧರಿಗೆ ಗೌರವ ಸಲ್ಲಿಸಿದ ನಂತರ ಮಾತನಾಡಿದ ಅವರು, ಎನ್ ಕೌಂಟರ್ ಆದ ಐವರು ಉಗ್ರರು ವಿದೇಶಿಯರಾಗಿದ್ದು, ಎಲ್ ಇಟಿ ಸಂಘಟನೆಗೆ ಸೇರಿದವರಾಗಿದ್ದಾರೆ. ಈಗಾಗಲೇ ಕೆಲವು ಉಗ್ರರು ನುಸುಳಿದ್ದು, ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


