ಬಿಜೆಪಿ ನಾಯಕ ವಿಶೇಶ್ವರ್ ಓಜಾ ಕೊಲೆ: ಓರ್ವ ಆರೋಪಿ ಬಂಧನ
ಬಿಹಾರದ ಬಿಜೆಪಿ ನಾಯಕ ವಿಶೇಶ್ವರ್ ಓಜಾ ಕೊಲೆ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು...

Published On :
ಪಾಟ್ನಾ: ಬಿಹಾರದ ಬಿಜೆಪಿ ನಾಯಕ ವಿಶೇಶ್ವರ್ ಓಜಾ ಕೊಲೆ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಿಹಾರದ ಬಿಜೆಪಿ ನಾಯಕ ವಿಶೇಶ್ವರ್ ಓಜಾರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಹರೇಂದ್ರ ಸಿಂಗ್ ಬಂಧಿತ ಆರೋಪಿ, ಇನ್ನು ಐವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಶಹಬಾದ್ ವಲಯದ ಡಿಐಜಿ ಎ ರೆಹಮಾನ್ ಹೇಳಿದ್ದಾರೆ.
ಮದುವೆ ಕಾರ್ಯಕ್ರಮವೊಂದನ್ನು ಮುಗಿಸಿ ಹಿಂದಿರುಗುತ್ತಿರುವಾಗ, ಓಜಾ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಬಿಹಾರದ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿದ್ದ ಓಜಾ ಇತ್ತೀಚಿನ ಚುನಾವಣೆಯಲ್ಲಿ ಶಾಹ್ ಪುರ್ ನಿಂದ ಪ್ರತಿನಿಧಿಸಿ ಸೋಲುಕಂಡಿದ್ದರು. ಮೂಲಗಳ ಪ್ರಕಾರ ಕೊಲೆ ಪ್ರಕರಣಗಳಲ್ಲಿ ಇವರ ಹೆಸರು ಕೇಳಿ ಬಂದಿತ್ತು. ಇತ್ತೀಚಿನ ದಿನಗಳಲ್ಲಿ ಬಿಹಾರ್ ರಾಜ್ಯದಲ್ಲಿ ರಾಜಕೀಯ ನಾಯಕರ ಹತ್ಯೆಗಳು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


