ದೇಶ ಇಬ್ಭಾಗವಾಗಲು ನೀವು ಬಯಸುತ್ತೀರಾ? ರಾಹುಲ್ ಗಾಂಧಿಗೆ ಅಮಿತ್ ಶಾ ಪ್ರಶ್ನೆ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ದೇಶ ದ್ರೋಹಿಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಹರಿಹಾಯ್ದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ...

ನವದೆಹಲಿ: ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ ಉಗ್ರ ಅಫ್ಜಲ್ ಗುರುವಿಗೆ ಬೆಂಬಲ ನೀಡಿ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬನನ್ನು ಬಂಧಿಸಿದ ಪ್ರಕರಣವನ್ನು ವಿರೋಧಿಸಿ ನಡೆಸಿದ ಪ್ರತಿಭಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು, ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ವಿರುದ್ಧ ಹರಿಹಾಯ್ದಿದ್ದಾರೆ. ರಾಹುಲ್ ಗಾಂಧಿಯವರು ದೇಶ ದ್ರೋಹಿಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಆಪಾದಿಸಿರುವ ಅವರು ತಮ್ಮ ಬ್ಲಾಗ್ ನಲ್ಲಿ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ಅವರು ಬ್ಲಾಗ್ ನಲ್ಲಿ ರಾಹುಲ್ ಗಾಂಧಿಯವರಿಗೆ 8 ಪ್ರಶ್ನೆಗಳನ್ನು ಕೇಳಿದ್ದು, ಅವು ಈ ರೀತಿ ಇವೆ:
1. ಪಾಕಿಸ್ತಾನ ಜಿಂದಾಬಾದ್ ಎಂದು ರಾಷ್ಟ್ರ ವಿರೋಧಿ ಘೋಷಣೆ ಕೂಗಿದ ವಿದ್ಯಾರ್ಥಿಗಳಿಗೆ ಯಾಕೆ ಬೆಂಬಲ ನೀಡುತ್ತೀರಿ? ಅಂದರೆ ನೀವು ಪ್ರತ್ಯೇಕತಾವಾದಿಗಳ ಕೈ ಜೋಡಿಸುತ್ತೀರಾ?
2. ಪ್ರತ್ಯೇಕತಾವಾದಿಗಳಿಗೆ ಬೆಂಬಲ ನೀಡುವ ಮೂಲಕ ಭಾವಾಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿಯನ್ನುಂಟುಮಾಡುತ್ತಿರುವ ನೀವು ದೇಶವನ್ನು ಇಬ್ಭಾಗ ಮಾಡಲು ಹೊರಟಿದ್ದೀರಾ?
3. ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಬಾರದೇ?
4. ದೇಶ ವಿರೋಧಿಗಳ ಪರವಾಗಿ ನಿಂತಿರುವ ನೀವು ದೇಶ ವಿರೋಧಿ ಗುಂಪುಗಳನ್ನು ಪ್ರೋತ್ಸಾಹಿಸಿದಂತಾಗುವುದಿಲ್ಲವೇ?
5. 1975ರಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವದ ಮೌಲ್ಯವೇ?
6. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಮನೋಧರ್ಮ ಹಿಟ್ಲರ್ ತರಹದ್ದಲ್ಲವೇ?
7. ಉಗ್ರ ಅಫ್ಜಲ್ ಗುರುವನ್ನು ಬೆಂಬಲಿಸುತ್ತಿರುವವರು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತೆಯ ಕೂಗು ಎತ್ತುವವರ ಬೆಂಬಲಕ್ಕೆ ನಿಲ್ಲುವುದು ಇದುವೇ ರಾಹುಲ್ ಗಾಂಧಿಯವರ ರಾಷ್ಟ್ರಪ್ರೇಮ?
8. ಪ್ರತ್ಯೇಕತಾವಾದಿಗಳಿಗೆ ನೀಡಿದ ಬೆಂಬಲವನ್ನೇ ನೀವು ಇತ್ತೀಚೆಗೆ ಸಿಯಾಚಿನ್ ನ ಹಿಮಪಾತಕ್ಕೆ ಸಿಲುಕಿ ಸಾವನ್ನಪ್ಪಿದ ಲ್ಯಾನ್ಸ್ ನಾಯಕ್ ಹನುಮಂತಪ್ಪ ಅವರಂತಹ ಸೈನಿಕರಿಗೆ ನೀಡುತ್ತೀರಾ?
ಹೀಗೆ ಪ್ರಶ್ನೆ ಕೇಳಿರುವ ಅಮಿತ್ ಶಾ, ದೇಶದ 125 ಕೋಟಿ ಜನರ ಪರವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಇದಕ್ಕೆ ಉತ್ತರಿಸಬೇಕು. ಅಲ್ಲದೆ ರಾಹುಲ್ ಗಾಂಧಿಯವರು ತಮ್ಮ ಕ್ರಮಕ್ಕೆ ದೇಶದ ಜನತೆಯ ಕ್ಷಮೆ ಕೋರಬೇಕು ಎಂದು ಶಾ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


