ದೇಶ

ರಷ್ಯಾ: ಅಗ್ನಿ ಅವಘಡದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಸಾವು

ರಷ್ಯಾದ ಸ್ಮೋಲೆನ್ಸ್ಕ್ ವಿಶ್ವವಿದ್ಯಾನಿಲಯದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಭಾರತೀಯ ಮೂಲದ ವಿದ್ಯಾರ್ಥಿನಿಯರು ಸಾವನ್ನಪ್ಪಿರುವುದಾಗಿ ವಿದೇಶಾಂಗ...

ರಷ್ಯಾ: ಅಗ್ನಿ ಅವಘಡದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಸಾವು
ಸುಷ್ಮಾ ಸ್ವರಾಜ್
Published On :

ನವದೆಹಲಿ: ರಷ್ಯಾದ ಸ್ಮೋಲೆನ್ಸ್ಕ್ ವಿಶ್ವವಿದ್ಯಾನಿಲಯದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಭಾರತೀಯ ಮೂಲದ ವಿದ್ಯಾರ್ಥಿನಿಯರು ಸಾವನ್ನಪ್ಪಿರುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರ ಮೂಲದ ಇಬ್ಬರು ವಿದ್ಯಾರ್ಥಿನಿಯರು ವಿಶ್ವವಿದ್ಯಾನಿಲಯದಲ್ಲಿ ವೈದ್ಯಕೀಯ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಂದು ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರು ಸಹ ಭಾರತೀಯ ಮೂಲದವರೆ ಎಂಬುದು ತಿಳಿದುಬಂದಿಲ್ಲ ಎಂದು ಟ್ವೀಟಿಸಿದ್ದಾರೆ.

ವಿದ್ಯಾನಿಲಯದ ನಾಲ್ಕನೇ ಹಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡು ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆಯಿಂದ ತಿಳಿದುಬಂದಿದ್ದು, ತನಿಖೆಯ ವಿವರಗಳನ್ನು ಇನ್ನಷ್ಟೇ ಬಹಿರಂಗವಾಗಬೇಕಿದೆ.

ವಿದ್ಯಾರ್ಥಿನಿಯರ ಸಾವಿಗೆ ಸಂತಾಪ ಸೂಚಿಸಿರುವ ಸುಷ್ಮಾ ಸ್ವರಾಜ್ ಅವರು, ಮೃತ ವಿದ್ಯಾರ್ಥಿನಿಯರ ಮೃತದೇಹ ಇಂದು ರಷ್ಯಾದ ರಾಜಧಾನಿ ಮಾಸ್ಕೋ ತಲುಪಲಿದ್ದು, ಮಾಸ್ಕೋದಿಂದ ಮುಂಬೈಗೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.