ಮಾರ್ಚ್ 1ರಂದು ಸಿಎಂ ಆಗಿ ಮೆಹಬೂಬಾ ಮುಫ್ತಿ ಪ್ರಮಾಣ ವಚನ?
ಜಮ್ಮು ಮತ್ತು ಕಾಶ್ಮೀರ ರಾಜಕೀಯ ಬಿಕ್ಕಟ್ಟು ಇತ್ಯರ್ಥವಾಗಿದ್ದು, ಇದೇ ಮಾರ್ಚ್ 1ರಂದು ಮುಫ್ಕಿ ಮೊಹಮದ್ ಸಯ್ಯೀದ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜಕೀಯ ಬಿಕ್ಕಟ್ಟು ಇತ್ಯರ್ಥವಾಗಿದ್ದು, ಇದೇ ಮಾರ್ಚ್ 1ರಂದು ಮುಫ್ಕಿ ಮೊಹಮದ್ ಸಯ್ಯೀದ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಪಿಡಿಪಿ ಮತ್ತು ಬಿಜೆಪಿ ಪಕ್ಷಗಳ ಮೈತ್ರಿಯಿಂದಾಗಿ ರಚನೆಯಾಗಿದ್ದ ಸರ್ಕಾರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ನಿಧನದಿಂದಾಗಿ ಅತಂತ್ರ ಸ್ಥಿತಿಯಲ್ಲಿತ್ತು. ಪಿಡಿಪಿ ಪಕ್ಷ ಬಿಜೆಪಿ ಸಖ್ಯ ತೊರೆದು ಚುನಾವಣೆಗೆ ಹೋಗುವ ಕುರಿತು ಊಹಾಪೋಹಗಳು ಸೃಷ್ಟಿಯಾಗಿದ್ದವು. ಆದರೆ ಅನಂತರ ನಡೆದ ರಾಜಕೀಯ ಬೆಳವಣಿಗೆಗಳು ಉಭಯ ಪಕ್ಷಗಳಲ್ಲಿನ ಬಿಕ್ಕಟ್ಟನ್ನು ಶಮನಗೊಳಿಸಿದ್ದು, ಇದೀಗ ಮುಫ್ತಿ ಮೊಹಮದ್ ಸಯ್ಯೀದ್ ಪುತ್ರಿಯಾದ ಮೆಹಬೂಬಾ ಮುಫ್ತಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ.
ಸೋಮವಾರ ಶ್ರೀನಗರದಲ್ಲಿ ನಡೆದ ಸಯೀದ್ ಸಂತಾಪ ಸಭೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ಸತ್ ಶರ್ಮಾ, ಮಾಜಿ ಡಿಸಿಎಂ ನಿರ್ಮಲ್ ಸಿಂಗ್ ಪಾಲ್ಗೊಂಡಿದ್ದರು. 370ನೇ ವಿಧಿ, ಸೇನಾ ವಿಶೇಷಾಧಿಕಾರ ವಿಚಾರವಾಗಿ ಎರಡು ಪಕ್ಷಗಳ ಸಹಮತಕ್ಕೆ ಬಂದಿದ್ದು, ಸರ್ಕಾರ ರಚನೆಗೆ ಒಪ್ಪಿಗೆ ನೀಡಿದೆ ಎಂದು ಗೊತ್ತಾಗಿದೆ. ಸದ್ಯದಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ಪ್ರಧಾನಿ ನರೇಂದ್ರಮೋದಿ ಈ ತಿಂಗಳ ಅಂತ್ಯಕ್ಕೆ ಭೇಟಿಯಾಗಿ ಸರ್ಕಾರ ರಚನೆಯನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


