ದೇಶ

ಜೆಎನ್ ಯು ವಿವಾದ: 14 ಹಿರಿಯ ದೆಹಲಿ ಪೊಲೀಸರ ವರ್ಗಾವಣೆ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು) ಆವರಣದಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ದೇಶ ವಿರೋಧಿ ಚಟುವಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೆಎನ್ ಯು ವಿವಾದ: 14 ಹಿರಿಯ ದೆಹಲಿ ಪೊಲೀಸರ ವರ್ಗಾವಣೆ
ಜೆಎನ್ ಯು ವಿವಾದ: 14 ಹಿರಿಯ ದೆಹಲಿ ಪೊಲೀಸರ ವರ್ಗಾವಣೆ
Published On :
ನವದೆಹಲಿ; ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು) ಆವರಣದಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ದೇಶ ವಿರೋಧಿ ಚಟುವಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 14 ದೆಹಲಿ ಹಿರಿಯ ಪೊಲೀಸರನ್ನು ವರ್ಗಾವಣೆ ಮಾಡಿರುವುದಾಗಿ ಬುಧವಾರ ತಿಳಿದುಬಂದಿದೆ. 
ಜೆಎನ್ ಯು ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದಲೂ ಪ್ರತಿಭಟನೆಗಳೂ ನಡೆಯುತ್ತಲೇ ಇದ್ದು, ಸೋಮವಾರ ನಡೆದ ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಂಡಿತ್ತು. ಪ್ರಕರಣ ಸಂಬಂಧ ಪಟಿಯಾಲ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ವಿವಿಯ ವಿದ್ಯಾರ್ಥಿಗಳು ಮತ್ತು ಪತ್ರಕರ್ತರ ಮೇಲೆ ವಕೀಲರ ವೇಷದಲ್ಲಿದ್ದವರು ಹಲ್ಲೆ ಮಾಡಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ತಮಗೆ ಸಂಬಂಧವೇ ಇಲ್ಲದಂತೆ ವರ್ತಿಸಿದ್ದರು ಎಂದು ಹೇಳಿ ದೆಹಲಿ ಪೊಲೀಸರ ವಿರುದ್ಧ ಹಲವು ಆರೋಪಗಳು ಕೇಳಿಬಂದಿದ್ದವು. ಅಲ್ಲದೆ, ವಿರೋಧ ಪಕ್ಷದ ನಾಯಕರು ಹಲವು ಟೀಕೆಗಳನ್ನು ವ್ಯಕ್ತಪಡಿಸಿದ್ದರು. 
ಇದರಂತೆ ಈ ಬಗ್ಗೆ ಕ್ರಮಕೈಗೊಂಡಿರುವ ದೆಹಲಿ ಆಡಳಿತಾರೂಢ ಸರ್ಕಾರ ಇದೀಗ ದೆಹಲಿ ಹಿರಿಯ 14 ಪೊಲೀಸರನ್ನು ವರ್ಗಾವಣೆ ಮಾಡಿದ್ದು, ಇದರಲ್ಲಿ ಪ್ರಮುಖವಾಗಿ ದೆಹಲಿ ಭ್ರಷ್ಟಾಚಾರ ನಿಗ್ರಹದ ಮುಖ್ಯಸ್ಥೆಯಾಗಿದ್ದ ಎಂ.ಕೆ.ಮೀನಾ ಅವರನ್ನು ಅಂಡಮಾನ್ ನಿಕೊಬಾರ್ ದ್ವೀಪಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 
ದೇಶದಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿ ಹಲವು ತಿರುವುಗಳನ್ನ ಪಡೆದುಕೊಳ್ಳುತ್ತಿರುವ ಸುನಂದಾ ಪುಷ್ಕರ್ ಅವರ ಸಾವು ಪ್ರಕರಣವನ್ನು ತನಿಖೆ ಮಾಡುತ್ತಿರುವ ಉಪ ಪೊಲೀಸ್ ಆಯುಕ್ತ (ದಕ್ಷಿಣ) ಪ್ರೇಮ್ ನಾಥ್ ಅವರನ್ನು ಮಿಜೋರಾಮ್ ಗೆ ವರ್ಗಾವಣೆ ಮಾಡಲಾಗಿದೆ. ಜಂಟಿ ಪೊಲೀಸ್ ಆಯುಕ್ತ (ಕೇಂದ್ರ ವ್ಯಾಪ್ತಿ) ಸಿ.ಕೆ. ಗೌತಮ್ ಅವರನ್ನು ಪಾಂಡಿಚೇರಿ ಹಾಗೂ ವಿಶೇಷ ಪೊಲೀಸ್ ಆಯುಕ್ತ (ಸಂಚಾರ ವಿಭಾಗ) ಮುಖೇಖ್ ಚಾಂದರ್ ಅವರನ್ನು ಗೋವಾಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.