ದೇಶ

ಬರ ಮುಕ್ತ ಮಹಾರಾಷ್ಟ್ರದ ರಾಯಭಾರಿ ಅಮಿರ್‌ಖಾನ್?

ಬಾಲಿವುಡ್ ನಟ ಅಮಿರ್‌ಖಾನ್ ಅವರನ್ನು ಮಹಾರಾಷ್ಟ್ರ ಸರ್ಕಾರ ಬರ ಮುಕ್ತ ಮಹಾರಾಷ್ಟ್ರ ಮಿಷನ್‌ನ ರಾಯಭಾರಿಯನ್ನಾಗಿ ನೇಮಕ ಮಾಡಲು ಚಿಂತನೆ...

ಬರ ಮುಕ್ತ ಮಹಾರಾಷ್ಟ್ರದ ರಾಯಭಾರಿ ಅಮಿರ್‌ಖಾನ್?
ಅಮಿರ್‌ಖಾನ್
Published On :
ಮುಂಬೈ:  ಬಾಲಿವುಡ್ ನಟ ಅಮಿರ್‌ಖಾನ್ ಅವರನ್ನು ಮಹಾರಾಷ್ಟ್ರ ಸರ್ಕಾರ ಬರ ಮುಕ್ತ ಮಹಾರಾಷ್ಟ್ರ ಮಿಷನ್‌ನ ರಾಯಭಾರಿಯನ್ನಾಗಿ ನೇಮಕ ಮಾಡಲು ಚಿಂತನೆ ನಡೆಸಿದೆ ಎಂದು ಬಲ್ಲಮೂಲಗಳು ವರದಿ ಮಾಡಿವೆ.
ದೇಶದಲ್ಲಿ ಅಸಹಿಷ್ಣುತೆ ಇದೆ ಎಂದು ಹೇಳಿ ವಿವಾದಕ್ಕೊಳಗಾಗಿದ್ದ ಅಮಿರ್‌ಖಾನ್,ಇನ್‌ಕ್ರೆಡಿಬಲ್ ಇಂಡಿಯಾ ಅಭಿಯಾನದ ರಾಯಭಾರಿ ಸ್ಥಾನದಿಂದ ಕೆಳಗಿಳಿದ ಬೆನ್ನಲ್ಲೇ ಮಹಾರಾಷ್ಟ್ರದ ಬಿಜೆಪಿ ಸರ್ಕಾರ ಆತನಿಗೆ ಹೊಸತೊಂದು ಜವಾಬ್ದಾರಿಯನ್ನು ನೀಡಿದೆ.
ಮುಂಬೈನಲ್ಲಿ ಮೇಕ್ ಇನ್ ಇಂಡಿಯಾ ಸಪ್ತಾಹದ ಆಚರಣೆಯಲ್ಲೂ ಮಹಾ ಸರ್ಕಾರ ಅಮಿರ್‌ಖಾನ್‌ರನ್ನು ಅತಿಥಿಯಾಗಿ ಆಹ್ವಾನಿಸಿತ್ತು. ಅಮಿರ್‌ಖಾನ್ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಜತೆ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು.
ಮಹಾರಾಷ್ಟ್ರ ಸರ್ಕಾರ ಬರ ಪೀಡಿತ ಪ್ರದೇಶದ ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು ಹಮ್ಮಿಕೊಂಡಿದೆ. 2019ರ ವೇಳೆಗೆ ಮಹಾರಾಷ್ಟ್ರವನ್ನು ಬರ ಮುಕ್ತ ವನ್ನಾಗಿ ಮಾಡುವ ಯೋಜನೆ ಇದಾಗಿದೆ. ಈ ಯೋಜನೆಯಡಿಯಲ್ಲಿ ಸುಮಾರು 25,000 ಬರ ಪೀಡಿತ ಗ್ರಾಮಗಳನ್ನು ಬರ ಮುಕ್ತಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ.
ಪ್ರಸ್ತುತ ಯೋಜನೆಯ ರಾಯಭಾರಿಯಾಗಲು ಮಹಾ ಸರ್ಕಾರ ಅಮಿರ್‌ಖಾನ್‌ರನ್ನು ಸಂಪರ್ಕಿಸಿದೆ ಎಂಬ ಸುದ್ದಿಯನ್ನು ಅಧಿಕೃತ ಮೂಲಗಳು ದೃಢಪಡಿಸಿವೆ
ಈ ಹಿಂದೆ ಮಹಾರಾಷ್ಟ್ರದ ರೈತರಿಗೆ ಸಹಾಯ ಮಾಡುವ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅಮಿರ್ ರು. 11 ಲಕ್ಷ ದೇಣಿಗೆ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.