ದೇಶ

ದೆಹಲಿಯಲ್ಲಿ ಆಪ್ ಸರ್ಕಾರ ಬಂದ ನಂತರ ಭ್ರಷ್ಟಾಚಾರ ಕಡಿಮೆಯಾಗಿಲ್ಲ: ಸಮೀಕ್ಷೆ

ಆಮ್ ಆದ್ಮಿ ಪಕ್ಷದ ಅಧಿಕಾರಾವಧಿಯಲ್ಲಿ ದೆಹಲಿಯಲ್ಲಿ ಭ್ರಷ್ಟಾಚಾರ ಕಡಿಮೆಯಾಗಿಲ್ಲ ಎಂದು ದೆಹಲಿಯ ಶೇ.77 ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯಲ್ಲಿ ಆಪ್ ಸರ್ಕಾರ ಬಂದ ನಂತರ ಭ್ರಷ್ಟಾಚಾರ ಕಡಿಮೆಯಾಗಿಲ್ಲ: ಸಮೀಕ್ಷೆ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (ಸಂಗ್ರಹ ಚಿತ್ರ)
Published On :

ನವದೆಹಲಿ: ಆಮ್ ಆದ್ಮಿ ಪಕ್ಷದ ಅಧಿಕಾರಾವಧಿಯಲ್ಲಿ ದೆಹಲಿಯಲ್ಲಿ ಭ್ರಷ್ಟಾಚಾರ ಕಡಿಮೆಯಾಗಿಲ್ಲ ಎಂದು ದೆಹಲಿಯ ಶೇ.77 ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ.
ಸ್ವರಾಜ್ ಅಭಿಯಾನ ನಡೆಸಿದ ಸಮೀಕ್ಷೆ ಪ್ರಕಾರ, ದೆಹಲಿಯಲ್ಲಿ ಆಪ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಭ್ರಷ್ಟಾಚಾರ ಕಡಿಮೆ ಆಗಿಲ್ಲ ಎಂಬುದು ಶೇ.77 ರಷ್ಟು ಜನರ ಅಭಿಪ್ರಾಯವಾದರೆ ಇನ್ನು ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ನೀಡಿದ್ದ ಭರವಸೆಗಳಾದ 20 ಸಾವಿರ ಲಿಟರ್ ಉಚಿತ ನೀರು, ವಿದ್ಯುತ್ ದರ ಇಳಿಕೆ ಸೇರಿದಂತೆ ಹಲವು ಭರವಸೆಗಳನ್ನು ಈಡೇರಿಸಿಲ್ಲ ಎಂದು ಶೇ.62 ರಷ್ಟು ಮಂದಿ ಆರೋಪಿಸಿದ್ದಾರೆ.
ಸ್ವರಾಜ್ ಅಭಿಯಾನ ಆಮ್ ಆದ್ಮಿ ಪಕ್ಷದಿಂದ ಉಚ್ಛಾಟನೆಗೊಂಡ ನಾಯಕರ ಸಂಘಟನೆಯಾಗಿದ್ದು  ಫೆ.10 -14 ವರೆಗೆ 70 ವಿಧಾನಸಭಾ ಕ್ಷೇತ್ರಗಳಲ್ಲಿ 10 ,000 ನಾಗರಿಕರನ್ನು ಸಮೀಕ್ಷೆಗೊಳಪಡಿಸಬೇಕಾಗಿದೆ. ಭ್ರಷ್ಟಾಚಾರ ನಿರ್ಮೂಲನೆಯೇ ಮುಖ್ಯ ಉದ್ದೇಶವನ್ನಾಗಿಟ್ಟುಕೊಂಡು ಆಮ್ ಆದ್ಮಿ ಪಕ್ಷ ಚುನಾವಣೆ ಎದುರಿಸಿದ್ದರ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಆಪ್ ಸರ್ಕಾರ ಬಂದ ನಂತರ ಭ್ರಷ್ಟಾಚಾರ ಕಡಿಮೆಯಾಗಿದೆಯೇ ಎಂಬುದು ಪ್ರಮುಖ ವಿಷಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.