ದೇಶ

ದೇಶದ್ರೋಹಿ ಹೇಳಿಕೆ: ಎಸ್ಎಆರ್ ಗಿಲಾನಿಗೆ 2 ವಾರಗಳ ನ್ಯಾಯಾಂಗ ಬಂಧನ

ದೆಹಲಿ ಪ್ರೆಸ್ ಕ್ಲಬ್ ನಲ್ಲಿ ದೇಶದ್ರೋಹಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ವಿಶ್ವವಿದ್ಯಾಲಯ ನಿವೃತ್ತ ಪ್ರಾಧ್ಯಪಕ ಪ್ರೊ. ಗಿಲಾನಿಗೆ 2 ವಾರಗಳ ನ್ಯಾಯಾಂಗ...

ದೇಶದ್ರೋಹಿ ಹೇಳಿಕೆ: ಎಸ್ಎಆರ್ ಗಿಲಾನಿಗೆ 2 ವಾರಗಳ ನ್ಯಾಯಾಂಗ ಬಂಧನ
ಎಸ್ಎಆರ್ ಗಿಲಾನಿ
Published On :

ನವದೆಹಲಿ: ದೆಹಲಿ ಪ್ರೆಸ್ ಕ್ಲಬ್ ನಲ್ಲಿ ದೇಶದ್ರೋಹಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ವಿಶ್ವವಿದ್ಯಾಲಯ ನಿವೃತ್ತ ಪ್ರಾಧ್ಯಪಕ ಪ್ರೊ. ಎಸ್.ಎ.ಆರ್ ಗಿಲಾನಿಗೆ 2 ವಾರಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ.

ಫೆಬ್ರವರಿ 10ರಂದು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಫ್ಝಲ್‌ ಗುರುವಿಗೆ  ಜೈಕಾರ ಕೂಗಿ ವಿವಾದ ಸೃಷ್ಟಿಸಿದ್ದ ಗಿಲಾನಿಯನ್ನು ಬಂಧಿಸಲಾಗಿತ್ತು. ಇಂದಿಗೆ ಗಿಲಾನಿ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ  ಪಾಟಿಯಾಲ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು.

ಪ್ರಕರಣ ವಿಚಾರಣೆ ನಡೆಸಿದ ಕೋರ್ಟ್ ಗಿಲಾನಿಗೆ 2 ವಾರಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಗಿಲಾನಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.