ಕೇಂದ್ರೀಯ ವಿವಿಗಳಲ್ಲಿ ತ್ರಿವರ್ಣ ಧ್ವಜ ಹಾರಾಟಕ್ಕೆ ಸ್ಮತಿ ಇರಾನಿ ಆಜ್ಞೆ
ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಜಾಗೃತಿಗೊಳಿಸುವ ಉದ್ದೇಶದಿಂದಾಗಿ ದೇಶದ ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಇನ್ನು ಮುಂದೆ ತ್ರಿವರ್ಣ ಧ್ವಜವನ್ನು ಹಾರಿಸಬೇಕು...

ನವದೆಹಲಿ: ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಜಾಗೃತಿಗೊಳಿಸುವ ಉದ್ದೇಶದಿಂದಾಗಿ ದೇಶದ ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಇನ್ನು ಮುಂದೆ ತ್ರಿವರ್ಣ ಧ್ವಜವನ್ನು ಹಾರಿಸಬೇಕು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮತಿ ಇರಾನಿ ಆಜ್ಞಾಪಿಸಿದ್ದಾರೆ.
ಸ್ಮತಿ ಇರಾನಿ ಅಧ್ಯಕ್ಷತೆಯಲ್ಲಿ ನಡೆದ ಎಲ್ಲ ಕೇಂದ್ರೀಯ ವಿಶ್ವವಿದ್ಯಾಲಯಗಳ 46 ವೈಸ್ ಚಾನ್ಸಲರ್‌ಗಳ ಸಭೆಯಲ್ಲಿ ಕೇಂದ್ರೀಯ ವಿವಿ ಕ್ಯಾಂಪಸ್‌ನಲ್ಲಿ 207 ಅಡಿ ಎತ್ತರದ ಸ್ತಂಭದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ನಿರ್ಧಾರವನ್ನು ಕೈಗೊಳ್ಳಲಾಯಿತು.
ದೇಶದ್ರೋಹಿ ಘೋಷಣೆಗಳನ್ನು ಕೂಗುವ ಮೂಲಕ ವಿವಾದಕ್ಕೆ ಕಾರಣವಾಗಿರುವ ಜವಾಹರ್‌ಲಾಲ್ ನೆಹರೂ ವಿವಿ ಆವರಣದಲ್ಲಿ ನಿರ್ಧಾರದ ಅನುಷ್ಠಾನದ ಮೊದಲ ಹೆಜ್ಜೆಯಾಗಿ ತ್ರಿವರ್ಣ ಧ್ವಜವನ್ನು ಹಾರಿಸಲಾಗುವುದು ಎಂದು ಮೂಲಗಳು ಹೇಳಿವೆ.
ದೆಹಲಿಯ ಜೆಎನ್‌ಯು ಕ್ಯಾಂಪಸ್‌ನಲ್ಲಿ ಈಚೆಗೆ ಅಫ್ಜಲ್ ಗುರು ಶ್ರದ್ಧಾಂಜಲಿ ಸಭೆ ನಡೆದ ಸಂದರ್ಭದಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಲಾದ ಘಟನೆಯಿಂದ ಇಡಿಯ ದೇಶವೇ ವಿಚಲಿತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


