ಜೆಎನ್ ಯು ವಿವಾದ: ರಾಷ್ಟ್ರಪತಿ ಭೇಟಿ ಮಾಡಿದ ರಾಹುಲ್ ಗಾಂಧಿ
ವಿವಾದಿತ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ ಪ್ರಕರಣ ಸಂಬಂಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿದ್ದಾರೆಂದು ತಿಳಿದುಬಂದಿದೆ...

Published On :
ನವದೆಹಲಿ; ವಿವಾದಿತ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ ಪ್ರಕರಣ ಸಂಬಂಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿದ್ದಾರೆಂದು ತಿಳಿದುಬಂದಿದೆ.
ಜೆಎನ್ ಯು ವಿವಾದ ಸಂಬಂಧ ಈಗಾಗಲೇ ಪಕ್ಷದ ಹಿರಿಯ ಶಾಸಕರೊಂದಿಗೆ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿರುವ ಅವರು, ಪಟಿಯಾಲ ಕೋರ್ಟ್ ಆವರಣದಲ್ಲಿ ನಡೆದ ಘಟನೆ ಹಾಗೂ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಕುರಿತಂತೆ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಜೆಎನ್ ಯು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ರಾಹುಲ್ ಗಾಂಧಿ ಯವರು ಪರೋಕ್ಷವಾಗಿ ನರೇಂದ್ರ ಮೋದಿಯವರ ವಿರುದ್ಧ ಹರಿಹಾಯ್ದಿದ್ದರು. ಕೆಲವು ರಾಷ್ಟ್ರ ವಿರೋಧಿ ಜನರು, ಸಂಸ್ಥೆಯ ಧ್ವನಿಯನ್ನು ದಮನಮಾಡಲು ಯತ್ನ ನಡೆಸುತ್ತಿದ್ದಾರೆ ಎಂದು ಹೇಳಿದ್ದರು. ಇದರಂತೆ ರಾಹುಲ್ ಗಾಂಧಿಯವರು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಹಿನ್ನೆಲೆಯಲ್ಲಿ ಅಲಹಾಬಾದ್ ಹೈ ಕೋರ್ಟ್ ರಾಹುಲ್ ವಿರುದ್ಧ ದೇಶವಿರೋಧಿ ಪ್ರಕರಣವನ್ನು ದಾಖಲಿ ಮಾಡಿಕೊಳ್ಳುವಂತೆ ಆದೇಶ ಹೊರಡಿಸಿತ್ತು.
ಜೆಎನ್ ಯು ಪ್ರಕರಣ ಸಂಬಂಧ ಬಂಧಿತನಾಗಿರುವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರನ್ನು ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆ ನಡೆಸಲಾಗುತ್ತಿತ್ತು. ಈ ವೇಳೆ ನ್ಯಾಯಾಲಯದ ಆವರಣದಲ್ಲಿ ಸಾಕಷ್ಟು ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕನ್ಹಯ್ಯ ಕುಮಾರ್ತ ಸೇರಿದಂತೆ ಪತ್ರಕರ್ತರ ಮತ್ತೆ ದಾಳಿ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


