ಆರ್'ಎಸ್ಎಸ್ ತನ್ನ ಸಿದ್ದಾಂತವನ್ನು ವಿದ್ಯಾರ್ಥಿಗಳ ಮೇಲೆ ಹೇರುತ್ತಿದೆ: ರಾಹುಲ್ ಗಾಂಧಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ತನ್ನ ದೋಷಪೂರಿತ ಸಿದ್ಧಾಂತವನ್ನು ವಿದ್ಯಾರ್ಥಿಗಳ ಮೇಲೆ ಹೇರುವ ಪ್ರಯತ್ನ ಮಾಡುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ಹೇಳಿದ್ದಾರೆ...

Published On :
ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ತನ್ನ ದೋಷಪೂರಿತ ಸಿದ್ಧಾಂತವನ್ನು ವಿದ್ಯಾರ್ಥಿಗಳ ಮೇಲೆ ಹೇರುವ ಪ್ರಯತ್ನ ಮಾಡುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ಹೇಳಿದ್ದಾರೆ.
ಜೆಎನ್ ಯು ವಿವಾದ ಕುರಿತಂತೆ ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಆರ್'ಎಸ್ಎಸ್ ವಿರುದ್ಧ ಹರಿಹಾಯ್ದಿದ್ದು, ವಿದ್ಯಾರ್ಥಿಗಳ ಧ್ವನಿಯ್ನು ದಮನಮಾಡಲು ಆರ್'ಎಸ್ಎಸ್ ಯತ್ನ ನಡೆಸುತ್ತಿದ್ದು ತನ್ನ ಅವನತಿಯಾಗಿರುವ ಸಿದ್ಧಾಂತವನ್ನು ವಿದ್ಯಾರ್ಥಿಗಳ ಮೇಲ ಹೇರುತ್ತಿದೆ ಎಂದು ಆರೋಪಿಸಿದ್ದಾರೆ.
ದೇಶದ ಅಭಿವೃದ್ಧಿ ಹಾಗೂ ಬೆಳವಣಿಕೆಯಾಗುತ್ತಿರುವುದು ವಿದ್ಯಾರ್ಥಿಗಳಿಂದ. ಆದರೆ, ಆರ್'ಎಸ್ಎಸ್ ತನ್ನ ದೋಷಪೂರಿತ ಸಿದ್ಧಾಂತವನ್ನು ವಿದ್ಯಾರ್ಥಿಗಳ ಮೇಲೆ ಹೇರುತ್ತಿದೆ. ಇದು ನಿಜಕ್ಕೂ ಈ ವರೆಗೂ ಎಂದೂ ನಡೆಯದ ದೊಡ್ಡ ಅಪರಾಧವಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಪಟಿಯಾಲ ಕೋರ್ಟ್ ಆವರಣದಲ್ಲಿ ನಡೆದ ಘಟನೆ ಕುರಿತಂತೆ ಕಿಡಿಕಾರಿದ ಅವರು, ಪತ್ರಕರ್ತರ ಮೇಲೆ ಯಾವ ರೀತಿಯಲ್ಲಿ ಹಲ್ಲೆ ನಡೆಸಲಾಯಿತು ಎಂಬುದನ್ನು ಇಡೀ ದೇಶದ ಜನತೆ ನೋಡಿದ್ದಾರೆ. ಘಟನೆ ವೇಳೆ ದೆಹಲಿ ಪೊಲೀಸರು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಈ ಘಟನೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತ ವರ್ಚಸ್ಸು ಹಾಳಾಗುವಂತೆ ಮಾಡುತ್ತಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pranab Mukherjeeಪ್ರಣಬ್ ಮುಖರ್ಜಿRSSRahul Gandhiರಾಹುಲ್ ಗಾಂಧಿJNUಜೆಎನ್ ಯುಆರ್\'ಎಸ್ಎಸ್Dead ideologyದೋಷಪೂರಿತ ಸಿದ್ದಾಂತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


