ಕನ್ಹಯ್ಯ ಕುಮಾರ್ ಜಾಮೀನು ಅರ್ಜಿ ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ
ದೇಶ ದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ...

Published On :
ನವದೆಹಲಿ: ದೇಶ ದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರು ಜಾಮೀನು ಕೋರಿ ಗುರುವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಕನ್ಹಯ್ಯ ಕುಮಾರ್ ಪರ ವಕೀಲ ರಾಜು ರಾಮಚಂದ್ರನ್ ಅವರು ಜಾಮೀನು ಇಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿದ ಕೋರ್ಟ್ ವಿಚಾರಣೆಯನ್ನು ನಾಳೆ ನಿಗದಿಪಡಿಸಿದೆ.
ಈಗಿರುವ ಸ್ಥಿತಿಯಲ್ಲಿ ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಹೀಗಾಗಿ ನೇರವಾಗಿ ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಿದ್ದು, ಸಂವಿಧಾನದ 32ನೇ ಕಲಂನಡಿ ಆರೋಪಿಗೆ ಜಾಮೀನು ನೀಡಬೇಕು ಎಂದು ಕನ್ಹಯ್ಯ ಕುಮಾರ್ ಅವರು ಮನವಿ ಮಾಡಿದ್ದಾರೆ.
ಕಳೆದ ಫೆ.9 ರಂದು ಜೆಎನ್ ಯು ವಿಶ್ವವಿದ್ಯಾನಿಲಯದಲ್ಲಿ ಕೆಲವು ವಿದ್ಯಾರ್ಥಿಗಳು ಉಗ್ರ ಅಫ್ಜಲ್ ಗುರು ಗಲ್ಲಿಗೇರಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ದೇಶವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ದೆಹಲಿ ಪೊಲೀಸರು ಫೆ.12ರಂದು ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷನನ್ನು ಬಂಧಿಸಿದ್ದು, ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


