ರೈತರ ಕಲ್ಯಾಣಕ್ಕಾಗಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಸಂಯೋಜನೆ: ಮೋದಿ
ರೈತರ ಕಲ್ಯಾಣಕ್ಕಾಗಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಸಂಯೋಜನೆ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ...

ನವದೆಹಲಿ: ರೈತರ ಕಲ್ಯಾಣಕ್ಕಾಗಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಸಂಯೋಜನೆ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಮಧ್ಯಪ್ರದೇಶದಲ್ಲಿ ನಡೆದ ಕಿಸಾನ್ ಕಲ್ಯಾಣ್ ಮೇಳಾದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ರಾಜ್ಯದಲ್ಲಿ ರೈತರಿಗಾಗಿ ಹಲವು ಕಲ್ಯಾಣ ಕಾರ್ಯಗಳನ್ನು ಮಾಡಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಮಹಾನ್ ಸಾಧನೆ ಮಾಡುವುದು ಸುಲಭದ ಕೆಲಸವೆನಲ್ಲ ಎಂದು ಹೇಳಿದ್ದಾರೆ.
ದೇಶದಲ್ಲಿ ಕೃಷಿ ಇತಿಹಾಸ ನಿರ್ಮಿಸಬೇಕಾದರೆ ಸರ್ಕಾರ ಹಾಗೂ ರೈತರು ಜೊತೆಯಾಗಿ ಕೆಲಸ ಮಾಡಬೇಕಿದೆ ಎಂದರು.
ಒಬ್ಬನೇ ಒಬ್ಬ ರೈತನ ಬೆಳೆ ನಷ್ಟವಾದರೂ ಆತ ಪರಿಹಾರಕ್ಕೆ ಅರ್ಹ ಎಂದ ಅವರು, ಬರಗಾಲ ಅಥವಾ ನೆರೆಯಿಂದ ಸಂತ್ರಸ್ತರಾದ ರೈತರಿಗೆ ಸಹಾಯ ಹಸ್ತವಾಗಿ ಕಿಸಾನ್ ವಿಮಾ ಯೋಜನೆ ಮೂಲಕ ಧೈರ್ಯ ತುಂಬುವ ಕಾರ್ಯ ನಡೆಯಲಿದೆ ಎಂದು ಮೋದಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


