ದೇಶ

ಅರುಣಾಚಲದಲ್ಲಿ ನೂತನ ಸರ್ಕಾರ ರಚನೆಗೆ 'ಸುಪ್ರೀಂ' ಅಸ್ತು

ಅರುಣಾಚಲ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿ ನೂತನ ಸರ್ಕಾರ ರಚನೆಗೆ ಅವಕಾಶ ನೀಡಿದೆ...

ಅರುಣಾಚಲದಲ್ಲಿ ನೂತನ ಸರ್ಕಾರ ರಚನೆಗೆ 'ಸುಪ್ರೀಂ' ಅಸ್ತು
ಸುಪ್ರೀಂಕೋರ್ಟ್
Published On :

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿ ನೂತನ ಸರ್ಕಾರ ರಚನೆಗೆ ಅವಕಾಶ ನೀಡಿದೆ.

ಅರುಣಾಚಲಪ್ರದೇಶದಲ್ಲಿ ಹೊಸ ಸರ್ಕಾರ ರಚನೆ ತಡೆಗೆ ಕಾಂಗ್ರೆಸ್ ಯತ್ನಿಸಿತ್ತು. ಇದೀಗ ಸುಪ್ರೀಂಕೋರ್ಟ್ ತಡೆಯಾಜ್ಞೆ ರದ್ದು ಪಡಿಸಿದ್ದು, ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದೆ.

ಇತ್ತೀಚೆಗಷ್ಟೆ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಬೋಧಿಸದಂತೆ ರಾಜ್ಯಪಾಲರನ್ನು ತಡೆಯಲು ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಇದೀಗ ನೂತನ ಸರ್ಕಾರ ರಚನೆಗೆ ಅವಕಾಶ ನೀಡಿದೆ.

ಬಂಡಾಯ ಕಾಂಗ್ರೆಸ್ಸಿನ ನಾಯಕ ಕಲಿಖೊ ಪುಲ್ ಅವರು 31 ಮಂದಿ ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಹಕ್ಕು ಪ್ರತಿಪಾದಿಸಿದ್ದರು. ಈ ಪೈಕಿ 19 ಮಂದಿ ಬಂಡಾಯ ಕಾಂಗ್ರೆಸ್ಸಿಗರಾದರೆ, 11 ಮಂದಿ ಬಿಜೆಪಿ ಹಾಗೂ ಇಬ್ಬರು ಪಕ್ಷೇತರ ಶಾಸಕರಿದ್ದಾರೆ. ಇನ್ನು ಪ್ರಕರಣ ಸುಪ್ರೀಂಕೋರ್ಟ್ ಅಂಗಳದಲ್ಲಿರುವುದರಿಂದ ರಾಜ್ಯಪಾಲರಿಗೆ ಸರ್ಕಾರ ರಚನೆಗೆ ಅವಕಾಶ ಕೊಡಬಾರದು ಎಂದು ಕಾಂಗ್ರೆಸ್ ಸುಪ್ರೀಂಗೆ ಮನವಿ ಮಾಡಿತ್ತು.

ಮಾಜಿ ಮುಖ್ಯಮಂತ್ರಿ ನಬಮ್ ಟುಕಿ ಅವರ ಸಚಿವರ ಬಂಡಾಯ ಚಟುವಟಿಕೆಗಳ ಕಾರಣ ಸರ್ಕಾರ ಬಹುಮತ ಕಳೆದುಕೊಂಡಿತ್ತು. ಹೀಗಾಗಿ ಅರುಣಾಚಲ ಪ್ರದೇಶದಲ್ಲಿ ಜನವರಿ 26ರಂದು ರಾಷ್ಟ್ರಪತಿ ಆಡಳಿತವನ್ನು ಹೇರಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.