ದೇಶ

ವಿವಾಹ ಸಂಭ್ರಮಾಚರಣೆಗೆ ಬಲಿಯಾದ ವರ

ತನ್ನ ವಿವಾಹದ ಸಂಭ್ರಮಾಚರಣೆಯಲ್ಲಿದ್ದ ವರನಿಗೆ ಆಕಸ್ಮಿಕವಾಗಿ ಗುಂಡು ತಗುಲಿದ್ದರಿಂದ ಆತನ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉತ್ತರ ...

ವಿವಾಹ ಸಂಭ್ರಮಾಚರಣೆಗೆ ಬಲಿಯಾದ ವರ
ಮೃತ ವರ ಅಮಿತ್ ರಸ್ತೋಗಿ
Published On :

ಸೀತಾಪುರ:  ತನ್ನ ವಿವಾಹದ ಸಂಭ್ರಮಾಚರಣೆಯಲ್ಲಿದ್ದ ವರನಿಗೆ ಆಕಸ್ಮಿಕವಾಗಿ ಗುಂಡು ತಗುಲಿದ್ದರಿಂದ ಆತನ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಸೀತಾಪುರ ಗ್ರಾಮದ ಅಮಿತ್ ರಸ್ತೋಗಿ ಮೃತ ದುರ್ದೈವಿ. ಪ್ರೇಮ ನಗರದಲ್ಲಿರುವ ಅತಿಥಿ ಗೃಹಕ್ಕೆ ಮದುವೆ ದಿಬ್ಬಣ ಬಂದಾಗ ಸಂಭ್ರಮಾಚರಣೆಯಲ್ಲಿ ಕೆಲವು ಜನರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಅದರಲ್ಲಿ ಒಂದು ಗುಂಡು ಅಮಿತ್ ತಲೆಯಲ್ಲಿ ತೂರಿ ಹೋಗಿದೆ. ಪ್ರಜ್ಞೆ ತಪ್ಪಿ ಬಿದ್ದ ಅಮಿತ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಬದುಕುಳಿಯಲಿಲ್ಲ.

ಈ ತಿಂಗಳ ಆರಂಭದಲ್ಲಿ ಶಾಲ್ಮಿ ಮತ್ತು ಬಾಲ್ಘಾಟ್‌ನಲ್ಲಿ ಸಂಭ್ರಮಾಚರಣೆ ವೇಳೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದನ್ನು ಇಲ್ಲಿ ಸ್ಮರಿಸಬಹುದು. ಸಂಭ್ರಮದಲ್ಲಿದ್ದ ಮದುವೆ ಮಂಟಪವೀಗ ಸ್ಮಶಾನವಾಗಿ ಪರಿವರ್ತಿತವಾಗಿದ್ದು ಎರಡು ಕುಟುಂಬದವರು ದುಃಖದ ಕಡಲಲ್ಲಿ ಮುಳುಗಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.