ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲಿದ್ ಹಿಮಾಚಲ ಪ್ರದೇಶದಲ್ಲಿ ಅಡಗಿದ್ದಾನೆ?
ಡೆಮಾಕ್ರಟಿಕ್ ವಿದ್ಯಾರ್ಥಿ ಸಂಘಟನೆ (ಡಿಎಸ್‌ಯು) ಮಾಜಿ ಸದಸ್ಯ, ತಲೆ ಮರೆಸಿಕೊಂಡಿರುವ ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲಿದ್ ಹಿಮಾಚಲ ಪ್ರದೇಶ...

Published On :
ನವದೆಹಲಿ: ಡೆಮಾಕ್ರಟಿಕ್ ವಿದ್ಯಾರ್ಥಿ ಸಂಘಟನೆ (ಡಿಎಸ್‌ಯು) ಮಾಜಿ ಸದಸ್ಯ, ತಲೆ ಮರೆಸಿಕೊಂಡಿರುವ ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲಿದ್ ಹಿಮಾಚಲ ಪ್ರದೇಶದಲ್ಲಿ ಅಡಗಿಕೊಂಡಿರುವ ಸಾಧ್ಯತೆಗಳು ಇವೆ ಎಂದು ಹೇಳಲಾಗುತ್ತಿದೆ.
ಜವಾಹರ್‌ಲಾಲ್ ವಿಶ್ವವಿದ್ಯಾನಿಲಯದಲ್ಲಿ ವಿವಾದಿತ ಕಾರ್ಯಕ್ರಮದ ಸೂತ್ರಧಾರ ಖಾಲಿದ್ ಆಗಿದ್ದು, ತಲೆಮರೆಸಿಕೊಂಡಿರುವ ಈತನಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.
ಸುದ್ದಿ ಪತ್ರಿಕೆಯೊಂದರ ವರದಿ ಪ್ರಕಾರ ದೆಹಲಿ ಪೊಲೀಸ್ ಅಧಿಕಾರಿಗಳು ಖಾಲಿದ್‌ನನ್ನು ಪತ್ತೆ ಹಚ್ಚಲು ಶಿಮ್ಲಾಗೆ ಹೋಗಿದ್ದಾರೆ. ಖಾಲಿದ್ ಅವರ ಮೊಬೈಲ್ ಫೋನ್ ರೆಕಾರ್ಡ್‌ನಿಂದ ಆತ ಶಿಮ್ಲಾದಲ್ಲಿದ್ದಾನೆಂದು ಪೊಲೀಸರು ಪತ್ತೆ ಹಚ್ಚಿರುವುದಾಗಿ ಬಲ್ಲಮೂಲಗಳು ಹೇಳಿವೆ.
ಕಳೆದ ಒಂದು ವಾರದಿಂದ ಖಾಲಿದ್ ಸೇರಿದಂತೆ ತಲೆಮರೆಸಿಕೊಂಡಿರುವ 6 ವಿದ್ಯಾರ್ಥಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Himachal Pradeshಜವಾಹರ್‌ಲಾಲ್ ವಿಶ್ವವಿದ್ಯಾನಿಲಯUmar KhalidDemocratic Students Unionಉಮರ್ ಖಾಲಿದ್ಡೆಮಾಕ್ರಟಿಕ್ ವಿದ್ಯಾರ್ಥಿ ಸಂಘಟನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


