ಮೋದಿ ಜನಪ್ರಿಯತೆ ಕಂಡು ಕಾಂಗ್ರೆಸ್ ನಾಯಕರು ಕನಸಲ್ಲೂ ಹೆದರುತ್ತಿದ್ದಾರೆ: ಶಿವರಾಜ್ ಸಿಂಗ್ ಚೌಹಾಣ್
ಹೆಚ್ಚುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆಯಿಂದಾಗಿ ಕಾಂಗ್ರೆಸ್ ಮುಖಂಡರು ರಾತ್ರಿ ಕನಸಲ್ಲೂ ಬೆವರುತ್ತಿದ್ದಾರೆ ಎಂದು ...

ಮಧ್ಯಪ್ರದೇಶ: ಹೆಚ್ಚುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆಯಿಂದಾಗಿ ಕಾಂಗ್ರೆಸ್ ಮುಖಂಡರು ರಾತ್ರಿ ಕನಸಲ್ಲೂ ಬೆವರುತ್ತಿದ್ದಾರೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಲೇವಡಿ ಮಾಡಿದ್ದಾರೆ.
ಅಮೆರಿಕ, ಇಂಗ್ಲೆಂಡ್, ದುಬೈ ಮತ್ತು ಫ್ರಾನ್ಸ್ ದೇಶ ಸೇರಿದಂತೆ ಯಾವ ದೇಶಕ್ಕಾದರೂ ಹೋಗಿ ಅಲ್ಲಿ ನಿಮಗೆ ಮೋದಿ, ಮೋದಿ ಎಂಬ ಮಂತ್ರ ಜಪಿಸುವುದನ್ನು ಕಾಣುತ್ತೇವೆ. ಕಾಂಗ್ರೆಸ್ ಮುಖಂಡರಿಗೆ ಮೋದಿ ಹೊರತು ಬೇರೆ ಯಾರು ಕಾಣಿಸುವುದಿಲ್ಲ ಎಂದು ವ್ಯಂಗ್ಯವಾಡಿದರು.
ಮಧ್ಯ ಪ್ರದೇಶದ ಗ್ರಾಮವೊಂದರಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯಾಜನೆ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರಕಾರ ರಾಜ್ಯದ ರೈತರಿಗಾಗಿ 2 ಸಾವಿರ ಕೋಟಿ ರೂಪಾಯಿಗಳ ಬರಪೀಡಿತ ಪರಿಹಾರ ಅನುದಾನವನ್ನು ಘೋಷಿಸಿದೆ ಎಂದು ತಿಳಿಸಿದ್ದಾರೆ. ಹೊಸ ಬೆಳೆ ವಿಮೆ ಯೋಜನೆಯಂತೆ ಒಂದು ವೇಳೆ, ಒಬ್ಬನೇ ಒಬ್ಬ ರೈತನ ಬೆಳೆ ನಾಶವಾದರೂ ಆ ರೈತನಿಗೆ ಬೆಳೆ ವಿಮೆ ದೊರೆಯಲಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


