ದೇಶ

ಉತ್ತರಪ್ರದೇಶದಲ್ಲಿ ದಲಿತ ಯುವಕನ ಜೀವಂತ ದಹನ

27 ವರ್ಷದ ದಲಿತನನ್ನು ಜೀವಂತವಾಗಿ ಸುಟ್ಟುಹಾಕಿರುವ ಘಟನೆ ಉತ್ತರಪ್ರದೇಶದ ಖೆಹರ್ ಪುರ ಹಳ್ಳಿಯಲ್ಲಿ...

ಉತ್ತರಪ್ರದೇಶದಲ್ಲಿ ದಲಿತ ಯುವಕನ ಜೀವಂತ ದಹನ
ಸಾಂದರ್ಭಿಕ ಚಿತ್ರ
Published On :
ಇಥಾ: 27 ವರ್ಷದ ದಲಿತನನ್ನು ಜೀವಂತವಾಗಿ ಸುಟ್ಟುಹಾಕಿರುವ ಘಟನೆ ಉತ್ತರಪ್ರದೇಶದ ಖೆಹರ್ ಪುರ ಹಳ್ಳಿಯಲ್ಲಿ ನಡೆದಿದೆ.
ದಲಿತ ಯುವಕ ಸಂತೋಷ್ ಕುಮಾರ್ ಮನೆಯಲ್ಲಿ ಮಲಗಿದ್ದ ವೇಳೆ, ಪರಿಚಿತ ವ್ಯಕ್ತಿಗಳೇ ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ಬೆಂಕಿಯಲ್ಲಿ ಸುಟ್ಟುಹೋಗುತ್ತಿದ್ದ ಮಗನನ್ನು ರಕ್ಷಿಸಲು ಪೋಷಕರು ಮುಂದಾಗಿದ್ದಾರೆ. ಆದರೆ, ಅಷ್ಟರಲ್ಲೇ ಮಗ ಸಾವನ್ನಪ್ಪಿದ್ದಾನೆ. ಪರಿಚಿತ ಬಾಬಿ ಮತ್ತು ಅವನ ಸ್ನೇಹಿತರು ಈ ಕೃತ್ಯವೆಸಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಹಳೆ ದ್ವೇಷದ ಹಿನ್ನಲೆಯಲ್ಲಿ ನನ್ನ ಮಗನನ್ನು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ಸಂತೋಷ್ ತಂದೆ ದೂರು ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.