ಜೆಎನ್ ಯು ವಿವಾದ: ಭದ್ರತೆ ನಿರಾಕರಿಸಿದ ಕನ್ಙಯ್ಯ ತಂದೆ
ಜೆಎನ್ ಯು ವಿವಾದಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿಯ ಸಂಘದ ಅಧ್ಯಕ್ಷ ಕನ್ಙಯ್ಯ ಕುಮಾರ್ ಅವರ ಕುಟುಂಬಕ್ಕೆ ನೀಡಲಾಗಿರುವ ಭದ್ರತೆಯನ್ನು ಕನ್ಹಯ್ಯ ತಂದೆ ನಿರಾಕರಿಸುವುದಾಗಿ ತಿಳಿದುಬಂದಿದೆ...

Published On :
ಬಿಹಾರ: ಜೆಎನ್ ಯು ವಿವಾದಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿಯ ಸಂಘದ ಅಧ್ಯಕ್ಷ ಕನ್ಙಯ್ಯ ಕುಮಾರ್ ಅವರ ಕುಟುಂಬಕ್ಕೆ ನೀಡಲಾಗಿರುವ ಭದ್ರತೆಯನ್ನು ಕನ್ಹಯ್ಯ ತಂದೆ ನಿರಾಕರಿಸುವುದಾಗಿ ತಿಳಿದುಬಂದಿದೆ.
ನಮ್ಮ ಗ್ರಾಮ ನಮ್ಮೊಂದಿಗಿದ್ದು, ನಮಗೆ ಭದ್ರತೆಯ ಅಗತ್ಯವಿಲ್ಲದಿರುವುದರಿಂದ ಸೌಜನ್ಯಯುತವಾಗಿ ಪೊಲೀಸರನ್ನು ಹಿಂದಕ್ಕೆ ಕಳುಹಿಸಿದ್ದೇವೆ. ನ್ಯಾಯಾಲಯದಲ್ಲಿ ನಮ್ಮ ಮಗನ ಮೇಲೆ ಹಲ್ಲೆ ನಡೆದಿದೆ. ನಮಗೆ ಭದ್ರತೆ ನೀಡುವ ಬದಲು ಮಗನಿಗೆ ನೀಡಿ ಎಂದು ಹೇಳಿದ್ದಾರೆ.
ಜೆಎನ್ ಯು ವಿದ್ಯಾರ್ಥಿ ಚುನಾವಣೆಯಲ್ಲಿ ನಮ್ಮ ಮಗ ಕನ್ಹಯ್ಯ ಬಿಜೆಪಿ ಹಾಗೂ ಆರ್'ಎಸ್ಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಸೋಲಿಸಿದ್ದಕ್ಕಾಗಿ ಅತನನ್ನು ಶಿಕ್ಷಿಸಲಾಗುತ್ತಿದೆ. ಘಟನೆಯಿಂದಾಗಿ ನಮ್ಮ ಮಗನ ಜೀವನ ಹಾಳಾಗಿದೆ ಎಂದು ಕನ್ಹಯ್ಯ ಕುಮಾರ್ ತಂದೆ ಜೈಶಂಕರ್ ಸಿಂಗ್ ಆರೋಪಿಸಿದ್ದಾರೆ.
ಜೆನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ಆಯ್ಕೆಯಾಗಿರುವ ಕನ್ಹಯ್ಯ ಕುಮಾರ್ ತಂದೆ ಎರಡು ವರ್ಷಗಳಿಂದ ಪಾರ್ಶ್ವವಾಯು ಪೀಡಿತರಾಗಿ ಬಳಲುತ್ತಿದ್ದಾರೆ. ತಾಯಿ ಮೀನಾ ದೇವಿ ಅಂಗನವಾಡಿ ಶಿಕ್ಷಕಿಯಾಗಿದ್ದು, ಕೇವಲ ರೂ. 4,000 ವೇತನದಲ್ಲಿ ಅವರ ಕುಟುಂಬ ಜೀವನ ಸಾಗಿಸುತ್ತಿದೆ. ಬಿಹಾರದ ಬೇಗುಸರೈ ಜಿಲ್ಲೆಯ ಬಾರೌನಿ ಪೊಲೀಸ್ ಠಾಣಾ ವ್ಯಾಪ್ತಿಯ ಮಸ್ನದ್ ಪುರದಲ್ಲಿ ಕನ್ಹಯ್ಯ ಹೆತ್ತವರು ವಾಸಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


