ಬಿಜೆಪಿ, ಆರ್ ಎಸ್ ಎಸ್ ನ್ನು ವಿರೋಧಿಸಿದರೆ ಅದು ದೊಡ್ಡ ಅಪರಾಧವಾಗುತ್ತೆ: ಕೇಜ್ರಿವಾಲ್
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅರವಿಂದ್ ಕೇಜ್ರಿವಾಲ್ ಬಿಜೆಪಿ ಹಾಗೂ ಆರ್ ಎಸ್ ಎಸ್ ನ್ನು ವಿರೋಧಿಸಿದರೆ ದೊಡ್ಡ ಅಪರಾಧವಾಗುತ್ತದೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅರವಿಂದ್ ಕೇಜ್ರಿವಾಲ್ ಬಿಜೆಪಿ ಹಾಗೂ ಆರ್ ಎಸ್ ಎಸ್ ನ್ನು ವಿರೋಧಿಸಿದರೆ ದೊಡ್ಡ ಅಪರಾಧವಾಗುತ್ತದೆ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದಿದ್ದಾರೆ.
ಬಿಜೆಪಿ ಹಾಗೂ ಆರ್ ಎಸ್ ಎಸ್ ನ ಬೆಂಬಲಿಗರು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳಲು ಬಿಜೆಪಿ ವಿಫಲವಾಗಿದೆ. "ನೀವು ಬಿಜೆಪಿಯ ಬೆಂಬಲಿಗರಾಗಿದ್ದರೆ ಕೊಲೆ, ಅತ್ಯಾಚಾರ, ಹಲ್ಲೆ ನಡೆಸುವುದು ಅಪರಾಧವಲ್ಲ, ಆದರೆ ಬಿಜೆಪಿ ಆರ್ ಎಸ್ ಎಸ್ ನ್ನು ವಿರೋಧಿಸುವುದು ದೊಡ್ಡ ಅಪರಾಧವಾಗುತ್ತದೆ ಇದು ಕೇಂದ್ರದ ಹೊಸ ಐಪಿಸಿ ಸೆಕ್ಷನ್" ಎಂದು ಕೇಜ್ರಿವಾಲ್ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
ಯಾರ ಮೇಲಾದರೂ ಹಲ್ಲೆ ನಡೆಸಿ ಕೊಲೆ ಮಾಡಿ, ಹಲ್ಲೆಗೊಳಗಾದ ವ್ಯಕ್ತಿ ದೇಶವಿರೋಧಿ ಘೋಷಣೆ ಕೂಗುತ್ತಿದ್ದ ಎಂದು ಹೇಳಿದರೆ ಅಪರಾಧಿಯನ್ನು ಬಿಡುಗಡೆ ಮಾಡಲಾಗುತ್ತದೆ ಇದು ಕೇಂದ್ರ ಸರ್ಕಾರದ ಹೊಸ ಭಾರತೀಯ ದಂಡ ಸಂಹಿತೆಯಾಗಿದೆ ಎಂದಿದ್ದಾರೆ ಕೇಜ್ರಿವಾಲ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


