ಶ್ರೀನಗರದಲ್ಲಿ ಉಗ್ರ ಅಪ್ಜಲ್ ಗುರು, ಇಸಿಸ್-ಪಾಕಿಸ್ತಾನ ಪರ ಘೋಷಣೆ
ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಕಿಡಿಗೇಡಿಗಳು ಉಗ್ರ ಅಪ್ಜಲ್ ಗುರು ಹಾಗೂ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಹಾಗೂ ಪಾಕಿಸ್ತಾನ ಪರವಾಗಿ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಕಿಡಿಗೇಡಿಗಳು ಉಗ್ರ ಅಪ್ಜಲ್ ಗುರು ಹಾಗೂ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಹಾಗೂ ಪಾಕಿಸ್ತಾನ ಪರವಾಗಿ ಘೋಷಣೆಗಳನ್ನು ಕೂಗಿದ್ದಾರೆ.
ಶ್ರೀನಗರದ ಜಾಮಾ ಮಸೀದಿ ಬಳಿ ಅಪ್ಜಲ್ ಗುರು ಪರ ಘೋಷಣೆಗಳನ್ನು ಕೂಗಿದ ಬೆಂಬಲಿಗರು ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಅಪ್ಜಲ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಅಪ್ಜಲ್ ಗುರು ಘೋಷಣೆ ಕೂಗಿದ ವಿದ್ಯಾರ್ಥಿಗಳಿಗಾಗಿ ಧನ್ಯವಾದ ತಿಳಿಸುವ ಬ್ಯಾನರ್ ಪ್ರದರ್ಶಿಸಿದ್ದಾರೆ.
ಈ ವೇಳೆ ಪುಂಡರ ಗುಂಪು ಶ್ರೀನಗರ ಪೊಲೀಸರ ಮೇಲೆ ಕಲ್ಲುಗಳನ್ನು ತೂರಿದ್ದಾರೆ. ಕಿಡಿಗೇಡಿಗಳನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


