ಭಾರತಕ್ಕೆ ನೇಪಾಳ ಪ್ರಧಾನಿ ಭೇಟಿ ವಿರೋಧಿಸಿ ಪ್ರತಿಭಟನೆ: 21 ಮಾದೇಸಿಗಳ ಬಂಧನ
ನೇಪಾಳದ ಪ್ರಧಾನಿ ಕೆಪಿ ಶರ್ಮಾ ಒಲಿ ಭಾರತಕ್ಕೆ ಭೇಟಿ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ನೇಪಾಳ...

Published On :
ನವದೆಹಲಿ: ನೇಪಾಳದ ಪ್ರಧಾನಿ ಕೆಪಿ ಶರ್ಮಾ ಒಲಿ ಭಾರತಕ್ಕೆ ಭೇಟಿ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ನೇಪಾಳ ಭಾರತೀಯ ಮೂಲದ ಮಾದೇಸಿ ಸಮುದಾಯದ 21 ಮಂದಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.
ಭಾರತಕ್ಕೆ ನೇಪಾಳದ ಪ್ರಧಾನಿ ಒಲಿ ಭೇಟಿಯನ್ನು ವಿರೋಧಿಸಿ ನವದೆಹಲಿಯಲ್ಲಿರುವ ಪ್ರಧಾನಿ ನಿವಾಸದವರೆಗೆ ಮಾದೇಸಿ ಸಮುದಾಯದವರು ಪ್ರತಿಭಟನಾ ರ್ಯಾಲಿ ಹೊರಟಿದ್ದರು. ಈ ವೇಳೆ ನೇಪಾಳದ ಪ್ರಧಾನಿ ಶರ್ಮಾ ಒಲಿ ಅವರು ಪ್ರಧಾನಿ ನಿವಾಸಕ್ಕೆ ತೆರಳಬೇಕಿತ್ತು. ಈ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರಲ್ಲಿ 21 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರು ದಿನಗಳ ಭಾರತ ಪ್ರವಾಸಕ್ಕಾಗಿ ನೇಪಾಳ ಪ್ರಧಾನಿ ಮತ್ತು ಅವರೊಂದಿಗೆ 77 ಜನರ ನಿಯೋಗ ಶುಕ್ರವಾರ ದೆಹಲಿಗೆ ಬಂದಿಳಿದಿದ್ದರು. ಇಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಉಭಯ ದೇಶಗಳ ಸಂಬಂಧ ಹಲವು ಪ್ರಮುಖ ವಿಷಯಗಳ ಕುರಿತು ವಿಸ್ತೃತ ಮಾತುಕತೆ ನಡೆಸಲಿದ್ದಾರೆ. ಅಷ್ಟೇ ಅಲ್ಲದೇ, ಮಾದೇಸಿಗಳ ಪ್ರತಿಭಟನೆಯಿಂದಾಗಿ ಭಾರತ ಮತ್ತು ನೇಪಾಳ ಒಪ್ಪಂದ ಹದಗೆಟ್ಟಿದ್ದು, ಈ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


