ಕಾಶ್ಮೀರದಲ್ಲಿ ಮುಂದುವರಿದ ಗುಂಡಿನ ಕಾಳಗ: ಓರ್ವ ಯೋಧನಿಗೆ ತಗುಲಿದ ಗುಂಡೇಟು
ಜಮ್ಮು ಕಾಶ್ಮೀರದಲ್ಲಿ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರೆದಿದ್ದು, ಓರ್ವ ಯೋಧನಿಗೆ...

Published On :
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರೆದಿದ್ದು, ಓರ್ವ ಯೋಧನಿಗೆ ಗುಂಡೇಟು ತಗುಲಿದೆ.
ಕಾಶ್ಮೀರದ ಪ್ಯಾಂಪೋರ್ ನಲ್ಲಿ ಎನ್ ಕೌಂಟರ್ ಮುಂದುವರೆಸಲಾಗಿದ್ದು, ಉಗ್ರರಿರುವ ಪ್ರದೇಶವನ್ನು ಯೋಧರು ಸುತ್ತುವರೆದಿದ್ದಾರೆ.
ಇಂದು ನಡೆದ ಗುಂಡಿನ ಕಾಳಗದಲ್ಲಿ ಓರ್ವ ಯೋಧನಿಗೆ ಗುಂಡೇಟು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಜಾಗ್ರತೆ ಕ್ರಮವಾಗಿ ಸುತ್ತಮುತ್ತಲಿನ ಜನರ ಸ್ಥಳಾಂತರಿಸಿ ಉಗ್ರರನ್ನು ಸುತ್ತವರೆಯಲಾಗಿದೆ ಎಂದು ತಿಳಿದು ಬಂದಿದೆ.
ನಿನ್ನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಪಾಂಪೊರೆ ಪಟ್ಟಣದಲ್ಲಿ ಸಿಆರ್ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಇಬ್ಬರು ಯೋಧರು ಸಾವನ್ನಪ್ಪಿ 14 ಯೋಧರು ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


