ದೇಶ

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಬಗ್ಗೆ ಸಮಯವೇ ಉತ್ತರಿಸಬೇಕು: ಮೆಹಬೂಬಾ

ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಜತೆಗೂಡಿ ಸರ್ಕಾರ ರಚನೆ ಸಮಯ ಮಾತ್ರವೇ ಉತ್ತರಿಸಬಲ್ಲದು ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಒಗಟಾಗಿ...

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಬಗ್ಗೆ ಸಮಯವೇ ಉತ್ತರಿಸಬೇಕು: ಮೆಹಬೂಬಾ
ಮೆಹಬೂಬ್ ಮುಫ್ತಿ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಜತೆಗೂಡಿ ಸರ್ಕಾರ ರಚನೆ ಸಮಯ ಮಾತ್ರವೇ ಉತ್ತರಿಸಬಲ್ಲದು ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಒಗಟಾಗಿ ಹೇಳಿದ್ದಾರೆ.

ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮೆಹಬೂಬಾ ತಮ್ಮ ತಂದೆಯ ಕನಸುಗಳನ್ನು ಸಾಕಾರಗೊಳಿಸಲು ಸಾಧ್ಯ ಎಂದು ಮನವರಿಕೆಯಾದ ಮೇಲಷ್ಟೇ ಪದಗ್ರಹಣಕ್ಕೆ ಮುಂದಾಗುವುದಾಗಿ ಹೇಳಿದರು.

ಒಂದೆಡೆ ಬಿಜೆಪಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಒಲವು ತೋರಿದೆ ಆದರೂ ಮೆಹಬೂಬಾ ಈ ಹೇಳಿಕೆ ನೀಡಿರುವುದು ಕಗ್ಗಂಟಾಗಿದೆ. ಸರ್ಕಾರ ರಚನೆ ಸಂಬಂಧ ಬಿಜೆಪಿ ಜತೆಗಿನ ಮಾತುಕತೆಯಲ್ಲಿ ಏನಾದರೂ ಬೆಳವಣಿಗೆ ಆಗಿದೆಯೇ ಎಂಬ ಪತ್ರಕರ್ತರ ಪ್ರಶ್ನೆ ಮೆಹಬೂಬಾ ಸಮಯ ಮಾತ್ರವೇ ಉತ್ತರಿಸಬಲ್ಲದು ಎಂದು ಒಗಟಿನ ಉತ್ತರ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.